ಕೊಪ್ಪಳ: ಬಳ್ಳಾರಿ ಉಸ್ತುವಾರಿ ಬದಲಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ ಎಂದು ಪರಿಸರ, ಜೀವಶಾಸ್ತ್ರ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.

ಗವಿಮಠಕ್ಕೆ ಭೇಟಿ ನೀಡಿ ಗವಿ ಸಿದ್ಧೇಶ್ವರ ಗದ್ದುಗೆ ದರ್ಶನ ಪಡೆದು ನಂತರ ಮಾತನಾಡಿದರು.

ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಿಕ್ಕ ನಂತರ ಮೊದಲ ಬಾರಿ ಜಿಲ್ಲಾ ಕೇಂದ್ರಕ್ಕೆ ಬಂದು ಗವಿಮಠದ ದರ್ಶನ ಪಡೆದಿದ್ದೇನೆ . ಉಸ್ತುವಾರಿ ಬದಲಾವಣೆ ಮಾಡಿದ್ದಕ್ಕೆ ಯಾವ ಅಸಮಾಧಾನವೂ ಇಲ್ಲ. ಬೇಕಾದರೆ ಮಂಪರು ಪರೀಕ್ಷೆ ಮಾಡಿಸಿ, ಆಗಲೂ ಇದೇ ಉತ್ತರ ಬರುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಬಿಜೆಪಿಯಿಂದ ಯಾರೂ ಕಾಂಗ್ರೆಸ್ಗೆ ಹೋಗಲ್ಲ ಬಂದರೆ ಕಾಂಗ್ರೆಸ್ನವರೇ ಬಿಜೆಪಿಗೆ ಬರಬಹುದು . ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂಬುದು ದೇಶದ 120 ಕೋಟಿ ಜನರಿಗೆ ಗೊತ್ತಿರುವ ವಿಚಾರ. ಬಿಜೆಪಿಯವರು ಕಾಂಗ್ರೆಸ್ಗೆ ಹೋಗ್ತಾರೆ ಅನ್ನೋದು ಬಸನಗೌಡ ಯತ್ನಾಳ ಅವರ ಅಭಿಪ್ರಾಯ ಇರಬಹುದು. ನನ್ನ ಅಭಿಪ್ರಾಯದಲ್ಲಿ ಬಿಜೆಪಿಯವರು ಯಾರೂ ಕಾಂಗ್ರೆಸ್ಗೆ ಹೋಗಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಸದ ಸಂಗಣ್ಣ ಕರಡಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸನ್ಮಾನಿಸಿ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.