ಗಂಗಾವತಿ: ನಗರದ ಕಂಪ್ಲಿ ರಸ್ತೆಯಲ್ಲಿನ ಅಮರ್‌ಭಗತ ಸಿಂಗ್ ಬಡಾವಣೆಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗುರುವಾರ ಇಲ್ಲಿನ ನಿವಾಸಿಗಳು ಶಾಸಕ ಜಿ.ಜನಾರ್ದನ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಸ್ಥಳೀಯ ನಿವಾಸಿ ಓಕಾಂರ ಮಾತನಾಡಿ, ಅಮರ್ ಭಗತಸಿಂಗ್ ನಗರ ಕೊಳೆಗೇರಿಯಾಗಿದ್ದು, ಇಲ್ಲಿನ ಜನ ಹಕ್ಕುಪತ್ರ, ಪಟ್ಟ ಇಲ್ಲದ ಸ್ಥಳಗಳಲ್ಲಿ ಮನೆ ನಿರ್ಮಿಸಿಕೊಂಡು ಬದುಕುತ್ತಿದ್ದಾರೆ. ಹಲವು ವರ್ಷಗಳಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ತಲೆ ಕೆಡಿಸಿಕೊಂಡಿಲ್ಲ ಎಂದು ಅಳಲು ತೋಡಿಕೊಂಡರು.

ಬಡಾವಣೆಯಲ್ಲಿ ಸರಿಯಾದ ರಸ್ತೆ, ಚರಂಡಿ, ವಿದ್ಯುತ್ ಸಂಪರ್ಕ, ಶುದ್ಧ ಕುಡಿಯುವ ನೀರು, ಸ್ವಚ್ಛತೆ ಇಲ್ಲದೆ ಗಬ್ಬುನಾರುತ್ತಿದೆ. ಇಲ್ಲಿ ಸೊಳ್ಳೆಗಳ ಕಾಟವು ಹೆಚ್ಚಿದೆ. ಈ ಬಗ್ಗೆ ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಕೂಡಲೇ ಅಗತ್ಯ ಸೌಲಭ್ಯಗಳು ಒದಗಿಸಬೇಕು ಎಂದು ಶಾಸಕರಿಗೆ ತಿಳಿಸಿದರು.

ದೇವರಾಜ, ವೀರೇಶ, ಪುಂಡಲೀಕ, ಶರಣಪ್ಪ ಸೇರಿ ಬಡಾವಣೆಯ ನೂರಾರು ನಿವಾಸಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.