ಗಂಗಾವತಿ: ‘ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹80 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ’ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಂಜನಾದ್ರಿ ಅಭಿವೃದ್ಧಿಗೆ ಬಿಜೆಪಿ ಸರ್ಕಾರವೂ ₹120 ಕೋಟಿ ಅನುದಾನ ಘೋಷಿಸಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಸಹ ನೆರವೇರಿಸಲಾಗಿತ್ತು’ ಎಂದರು.

‘ನಾನು ಶಾಸಕನಾಗಿದ್ದಾಗ ರೋಪ್ ವೇ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಈಗ ಸರ್ಕಾರ ಅನುದಾನ ನೀಡಲು ಮುಂದಾಗಿದೆ. ರೋಪ್ ವೇ ನಿರ್ಮಾಣ ಎನ್ಎಚ್ಎಲ್ಎಂ ಯೋಜನೆಯಡಿ ಮಂಜೂರಾಗಿದ್ದು, ರೈಟ್ಸ್ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಅಧಿಕಾರಿಗಳು ಅಂಜನಾದ್ರಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಲಿದ್ದಾರೆ’ ಎಂದರು.

ಬಿಜೆಪಿ ನಗರ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ಗ್ರಾಮೀಣ ಘಟಕದ ಅಧ್ಯಕ್ಷ ಚನ್ನಪ್ಪ ಮಳಗಿ, ಮುಖಂಡ ಸಂತೋಷ ಕೆ.ಲೋಜಿ, ಹನುಮಂತಪ್ಪ ನಾಯಕ, ನಗರಸಭೆ ಸದಸ್ಯ ನವೀನ ಮಾಲೀಪಾಟೀಲ, ವಾಸುದೇವ ನವಲಿ, ನೀಲಕಂಠ ಕಟ್ಟಿಮನಿ, ಶ್ರೀನಿವಾಸ ಧೂಳ, ಸಂಗಯ್ಯಸ್ವಾಮಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.