ಕೊಪ್ಪಳ: ‘ನಿಮ್ಮ ಭವಿಷ್ಯದ ಆಯ್ಕೆ ನೀವೇ ಮಾಡಬೇಕು. ವಿಚಾರ ಮಾಡಿ, ಗಟ್ಟಿ ನಿರ್ಧಾರ ಕೈಗೊಂಡು ಮುನ್ನಡೆಯಿರಿ’ ಎಂದುಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಎಸ್-ಯುಪಿಎಸ್ಸಿ ಸಂಸ್ಥೆಯು ಶನಿವಾರ ಹಮ್ಮಿಕೊಂಡಿದ್ದ ಉಚಿತ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯಾವುದೇ ರಂಗವಿರಲಿ, ಅದಕ್ಕೆ ತನ್ನದೇ ಘನತೆ ಯಿದೆ. ನಾವೇನಾಗಬೇಕು ಎಂಬ ಗುರಿ ಸ್ಪಷ್ಟವಾಗಿರಬೇಕು. ಸ್ಪರ್ಧಾತ್ಮಕ ಕಲಿಕೆಗೆ ಸಾಕಷ್ಟು ಅವಕಾಶಗಳಿವೆ’ ಎಂದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾತನಾಡಿ, ‘ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಹಲವು ಅಭ್ಯರ್ಥಿಗಳು ಆಸಕ್ತಿ ಹೊಂದಿದ್ದಾರೆ. ಜಿಲ್ಲಾಡಳಿತದಿಂದ ಅವರಿಗೆ ಸೂಕ್ತ ಮಾರ್ಗದರ್ಶನ ಮತ್ತು ನೆರವು ನೀಡಲಾಗುವುದು’ ಎಂದರು.

ಜಿಲ್ಲಾ ಪಂಚಾಯಿತಿಸಿಇಒ ಫೌಜಿಯಾ ತರನ್ನುಮ್ ಮಾತನಾಡಿ, ‘ನಗರ ಪ್ರದೇಶದ ಅಭ್ಯರ್ಥಿಗಳಿಗೆ ಸಾಕಷ್ಟು ಅವಕಾಶ, ಅನುಕೂಲಗಳಿವೆ. ಗ್ರಾಮೀಣ ಭಾಗದಲ್ಲೂ ಇಂತಹ ಅನುಕೂಲ, ಅವಕಾಶ ಕಲ್ಪಿಸಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಸಂಪನ್ಮೂಲ ವ್ಯಕ್ತಿ ಅಶೋಕ ಮಿರ್ಜಿ, ಆಯೋಜಕ ಹನುಮೇಶ ಎಸ್.ಹುಳ್ಕಿಹಾಳ, ಜಿ.ವಿನಾಯಕ, ಶಂಕ್ರಯ್ಯ ಅಬ್ಬಿಗೇರಿಮಠ, ಶರಣಬಸವ ಹುಲಿಹೈದರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.