ಗಂಗಾವತಿ: ತಾಲ್ಲೂಕಿನ ಆನೆಗೊಂದಿ ಗ್ರಾಮದ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹದ್ದೂರ್ ಅವರು (79) ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಮೂಲತಃ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಮೊಗಲ್ತುರ್ ರಾಜ ಮನೆತನ ದವರಾಗಿದ್ದು, ಗಂಗಾವತಿ ಕ್ಷೇತ್ರದ ಮಾಜಿ ಶಾಸಕರಾಗಿದ್ದ ದಿ. ತಿರುಮಲದೇವರಾಯರ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾಗಿದ್ದರು.

1978ರಿಂದ 1983ರವರೆಗೆ ಆನೆಗೊಂದಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ, ನಂತರ 1985ರಲ್ಲಿ ಮಂಡಲ ಪಂಚಾಯತಿ ಸದಸ್ಯರಾಗಿ ಕೆಲಸ ಮಾಡಿದ್ದರು.

ಮೃತರಿಗೆ ಪುತ್ರ, ಪುತ್ರಿ ಇದ್ದಾರೆ. ಸಂಜೆ ಸಾರ್ವಜನಿಕ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ಜರುಗಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.