ಕೊಪ್ಪಳ: ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಕೆ.ಎಂ. ಗುರುಬಸವರಾಜ ಅವರನ್ನು ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಕಚೇರಿಯ ಮಹಿಳಾ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿದ್ದ ದೃಶ್ಯ ಸಿ.ಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ, ಮಹಿಳಾ ಸಿಬ್ಬಂದಿ ದೂರು ನೀಡಿದ್ದರು. ಅಂದಿನ ಜಿಲ್ಲಾಧಿಕಾರಿ ಅವರು, ವಿಚಾರಣೆ ಕಾಯ್ದಿರಿಸಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಪುರಸಭೆ ತಹಶೀಲ್ದಾರ್ ಹುದ್ದೆಗೆ ಗುರುಬಸವರಾಜ ಅವರನ್ನುವರ್ಗಾವಣೆ ಮಾಡಿದ್ದರು.

‘ಕರ್ತವ್ಯದಲ್ಲಿ ದುರ್ನಡತೆ ತೋರಿದ್ದಗುರುಬಸವರಾಜ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ’ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.