ಕೊಪ್ಪಳ: ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು ಇರುವ ಜಿಲ್ಲೆಯ ಕುಷ್ಟಗಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಅಗತ್ಯದಷ್ಟು ಶೌಚಾಲಯ ಇಲ್ಲದಿರುವುದು ದುರದೃಷ್ಟಕರ. ಈ ಕುರಿತು ಮೂರು ದಿನಗಳಲ್ಲಿ ವಿವರವಾಗಿ ವರದಿ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಪದವಿಪೂರ್ವ ಶಿಕ್ಷಣ ಇಲಾಖೆಯ ಇಲ್ಲಿನ ಉಪನಿರ್ದೇಶಕರಿಗೆ ಪತ್ರ ಬರೆದಿದೆ.

ಈ ಕುರಿತು ‘ಪ್ರಜಾವಾಣಿ’ಯ ಮುಖಪುಟದಲ್ಲಿ ಬುಧವಾರ ‘ಸಾವಿರ ವಿದ್ಯಾರ್ಥಿನಿಯರಿಗೆ ಇರುವುದೊಂದೇ ಶೌಚಾಲಯ’ ವಿಶೇಷ ವರದಿ ಪ್ರಕಟವಾಗಿತ್ತು. ಈ ವರದಿ ಉಲ್ಲೇಖಿಸಿರುವ ರಕ್ಷಣಾ ಆಯೋಗ ‘ಕಾಲೇಜಿನಲ್ಲಿ ಶೌಚಾಲಯ ನಿರ್ಮಿಸಲು ಜಾಗದ ಸೌಲಭ್ಯವಿದ್ದರೂ ಮೂಲ ಅವಶ್ಯಕವಾಗಿರುವ ಶೌಚಾಲಯ ಇಲ್ಲದ ದುಸ್ಥಿತಿ ವಿಷಾದನೀಯ. ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು’ ಎಂದು ಪತ್ರದಲ್ಲಿ ಸೂಚಿಸಿದೆ.

ಶೌಚಾಲಯ ಸಮಸ್ಯೆ ತುರ್ತಾಗಿ ಪರಿಹರಿಸಲು ಒತ್ತಾಯ

ಕುಷ್ಟಗಿ ಪಟ್ಟಣದ ಬಾಲಕಿಯರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸರ್ಕಾರ ತುರ್ತಾಗಿ ಶೌಚಾಲಯ ಮತ್ತು ಕೊಠಡಿಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಎಐಡಿಎಸ್‌ಒ ಸಂಘಟನೆಯ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ವರದಿ ಉಲ್ಲೇಖಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಸರ್ಕಾರದಿಂದ ವಿವಿಧ ಯೋಜನೆಗಳಡಿ ಸಾಕಷ್ಟು ಅವಕಾಶಗಳಿದ್ದರೂ ಶೌಚಾಲಯ ನಿರ್ಮಿಸಲು ಸಾಧ್ಯವಾಗಿಲ್ಲ. ಇದರಿಂದ ವಿದ್ಯಾರ್ಥಿನಿಯರ ಓದಿಗೂ ತೊಂದರೆಯಾಗುತ್ತಿದೆ. ಬಡವರ ಮಕ್ಕಳೇ ಹೆಚ್ಚಿರುವ ಕಾಲೇಜಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಶಾಸಕರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ತುರ್ತಾಗಿ ಸಮಸ್ಯೆ ಪರಿಹರಿಸದೇ ಹೋದರೆ ಮುಂಬರುವ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.