ಅಳವಂಡಿ: ಸಮೀಪದ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸುವಂತೆ ಗ್ರಾಮಸ್ಥರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು.ಟಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಬೇಟಗೇರಿ ದೊಡ್ಡ ಗ್ರಾಮವಾಗಿದ್ದು, ಸುತ್ತಮುತ್ತಲಿನ ಹಲವು ಹಳ್ಳಿಗಳ ಜನರು ಇದೇ ಆಸ್ಪತ್ರೆಗೆ ಬರುತ್ತಾರೆ. ಪ್ರತಿನಿತ್ಯ ಒಂದರಿಂದ ಎರಡು ಹೆರಿಗೆ ಆಗುತ್ತಿದ್ದು. ನಿತ್ಯ ನೂರಾರು ಜನ ಆಸ್ಪತ್ರೆಗೆ ಆರೋಗ್ಯ ಸೇವೆಗಳನ್ನು ಪಡೆಯಲು ಬರುತ್ತಾರೆ. ಹೀಗಾಗಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಬೇಕು. ಸಿಬ್ಬಂದಿ ಕೊರತೆಯನ್ನು ಕೂಡಲೇ ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಗ್ರಾಮಸ್ಥರಾದ ಅಂದಾನಸ್ವಾಮಿ ಸಾಲಿಮಠ, ಏಳುಕೋಟೇಶ ಕೊಮಲಾಪುರ, ವಿಜಯ್ ಯತ್ನಳ್ಳಿ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.