ಕಾರಟಗಿ: ಪಟ್ಟಣದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಆಗಸ್ಟ್ 27ರಂದು ನಡೆದಾಗ ಪಕ್ಷ ಸದಸ್ಯರಿಗೆ ವಿಪ್ ಜಾರಿಗೊಳಿಸಿತ್ತು. ವಿಪ್ ಉಲ್ಲಂಘನೆ ಮಾಡಿದ 3 ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ಪುರಸಭೆ ಮುಖ್ಯಾಧಿಕಾರಿ ಸುರೇಶ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ನಮ್ಮ ಪಕ್ಷದಿಂದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮೌನಿಕಾ ಧನಂಜಯ ಮತ್ತು ಉಪಾಧ್ಯಕ್ಷ ಸ್ಥಾನದ ಆನಂದ ಮ್ಯಾಗಳಮನಿ ಪರ ಮತ ಚಲಾಯಿಸಲು ಪಕ್ಷ ವಿಪ್ ಜಾರಿಗೊಳಿಸಿತ್ತು. ಆದರೆ ಚುನಾವಣೆಯಲ್ಲಿ ಬಿಜೆಪಿಯ ಸದಸ್ಯರಾಗಿ ಆಯ್ಕೆಯಾಗಿರುವ ಸುಪ್ರಿಯಾ ಚಂದ್ರಶೇಖರ ಅರಳಿ, ಹೆಚ್. ಈಶಪ್ಪ ಮತ್ತು ಜಿ. ಅರುಣಾದೇವಿ ಮತ ಚಲಾಯಿಸಿದೇ ಸಭೆಯಿಂದ ದೂರ ಉಳಿದು, ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ. ಅವರ ವಿರುದ್ದ ಕ್ರಮಕೈಗೊಂಡು, ಅವರ ಸದಸ್ಯತ್ವ ಅನರ್ಹಗೊಳಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನಾಡಿಗೇರ, ಕಾನೂನು ಸಲಹೆಗಾರರ ರಾಜು ಬಾಕಳೆ, ಜಿಲ್ಲಾ ಕಾರ್ಯದರ್ಶಿ ಶಿವಶರಣೇಗೌಡ, ಪುರಸಭೆ ಸದಸ್ಯರಾದ ಬಸವರಾಜ ಕೊಪ್ಪದ, ಸೋಮನಾಥ ಬೇರಗಿ, ರಾಜಶೇಖರ ಸಿರಿಗೇರಿ ಕಾರಟಗಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಸವರಾಜ ಎತ್ತಿನಮನಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರತ್ನಕುಮಾರಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮೌನೇಶ ದಢೇಸೂಗೂರು, ಪ್ರಮುಖರಾದ ಬಸವರಾಜ ಶಿವಶಕ್ತಿ, ಶರಣಪ್ಪ ದೇವರಮನಿ, ಎರಿಸ್ವಾಮಿ ಬಿಲ್ಗಾರ್, ಶಶಿ ಮ್ಯಾದಾರ, ಆಂಜನೇಯ, ಸಿದ್ದು ಯರಡೋಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.