ಕುಷ್ಟಗಿ: ಒಳ ಹರಿವಿನ ಪ್ರಮಾಣ ಹೆಚ್ಚುತ್ತಿರುವುದರಿಂದ ತುಂಗಭದ್ರಾ ಜಲಾಶಯದ ನೀರಿನ ಮಟ್ಟ ಹೆಚ್ಚುತ್ತಿದ್ದು ಸಾಂಪ್ರದಾಯಿಕ ಪೂಜೆ ನೆರವೇರಿಸುವ ಮೂಲಕ ಜು.19 ರಂದು ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ ಹೇಳಿದರು.

ಗುರುವಾರ ಇಲ್ಲಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಅವರು, ಬೆಳಿಗ್ಗೆ 9 ಗಂಟೆಗೆ ಪೂಜೆ ಸಲ್ಲಿಸಿ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದ್ದು ಕೊಪ್ಪಳ ಕ್ಷೇತ್ರದ ಸಂಸದ ರಾಜಶೇಖರ ಹಿಟ್ನಾಳ ಕೂಡ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಕಾಲುವೆಗಳಿಗೆ ನೀರು ಹರಿಸಬೇಕಾದರೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ಆದರೆ ಸದ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಸಭೆ ನಡೆಸಲು ಸಾಧ್ಯವಾಗಿಲ್ಲ. ಇತ್ತ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚುತ್ತಿರುವುದು, ಬೇಗನೇ ನೀರು ಬಿಡುವಂತೆ ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಅಚ್ಚುಕಟ್ಟು ಪ್ರದೇಶದಲ್ಲಿನ ರೈತರಿಂದ ಬಹಳಷ್ಟು ಬೇಡಿಕೆ ಬಂದಿರುವ ಕಾರಣಕ್ಕೆ ಕಾಲುವೆಗಳಿಗೆ ನೀರು ಹರಿಸಲು ದಿಢೀರನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾಲುವೆಗಳಿಗೆ ಬೇಗನೆ ನೀರು ಹರಿಸಿದರೆ ಭತ್ತದ ಪೈರು ನಾಟಿ ಮಾಡಲು ಸಾಧ್ಯವಾಗುತ್ತದೆ ಎಂದು ರೈತರು ನೀರು ಹರಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.