ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಎಡದಂಡೆ ಮುಖ್ಯ ಕಾಲುವೆಗೆ ನವೆಂಬರ್ 30ರ ತನಕ 4,100 ಕ್ಯುಸೆಕ್ ನೀರು ಹರಿಸಲು ಬುಧವಾರ ನಡೆದ ತುಂಗಭದ್ರಾ ಯೋಜನೆಯ 119ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ತಾಲ್ಲೂಕಿನ ಮುನಿರಾಬಾದ್ ಕಾಡಾ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಸಭೆ ನಡೆಯಿತು.

ಆಗಸ್ಟ್ 3ರಿಂದ ನೀರು ಹರಿಸಲು ಆರಂಭಿಸಲಾಗಿದ್ದು, 4,100 ಕ್ಯುಸೆಕ್ ಅಥವಾ ನೀರು ಲಭ್ಯತೆ ಇರುವವರಿಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದರಂತೆ ನೀರು ಹರಿಸಲಾಗುತ್ತದೆ.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನವೆಂಬರ್ 30 ವರೆಗೆ 1300 ಕ್ಯುಸೆಕ್, ಬಲದಂಡೆ ಕೆಳಮಟ್ಟದ ಕಾಲುವೆಗೆ ನವೆಂಬರ್ 30ರ ವರೆಗೆ 850 ಕ್ಯುಸೆಕ್, ರಾಯಬಸವ ಕಾಲುವೆಗೆ ನವೆಂಬರ್ 30ರ ವರೆಗೆ 270 ಕ್ಯುಸೆಕ್ ಮತ್ತು ಎಡದಂಡೆ ಮೇಲ್ಮಟ್ಟದ ಕಾಲುವೆಗೆ ನವೆಂಬರ್ 30ವರೆಗೆ 25 ಕ್ಯುಸೆಕ್ ನೀರು ಹರಿಸಲಾಗುವುದು. ಮುಂದೆ ನೀರಿನ ಲಭ್ಯತೆ ಆಧರಿಸಿ ನೀರು ಹರಿಸುವುದಾಗಿ ತಂಗಡಗಿ ತಿಳಿಸಿದರು.

ತುಂಗಭದ್ರಾ ಜಲಾಶಯದಲ್ಲಿ ಸದ್ಯ 88 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಇದರಲ್ಲಿ 65 ಟಿಎಂಸಿ ಅಡಿ ನೀರು ರಾಜ್ಯದ ಪಾಲಿಗೆ ಕಭಿಸಲಿದೆ. ಈಗಾಗಲೇ 10 ಟಿಎಂಸಿ ನೀರು ಬಳಕೆ ಮಾಡಿದ್ದು, ಆಂಧ್ರಕ್ಕೆ 3 ಟಿಎಂಸಿ ಅಡಿ ನೀರು ಹರಿಸಲಾಗಿದೆ. ಕಾರ್ಖಾನೆಗಳಿಗೆ ನೀರು ಹಂಚಿಕೆ ಹಾಗೂ ಗುತ್ತಿಗೆ ನೌಕರರ ಬಾಕಿ ವೇತನ ಪಾವತಿ ಸಂಬಂಧ ಆಗಸ್ಟ್ 19ರಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಸಿ ನೀರು ಕಳ್ಳತನ ಸೇರಿ ಇತರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.