ಕುಕನೂರು: ತಾಲೂಕಿನಾದ್ಯಂತ ಮುಂಗಾರು ಮಳೆಯ ಕೊರತೆ ನಡುವೆ ಬಿತ್ತನೆ ಮಾಡಿದ್ದ ಹೆಸರು ಕಾಯಿ ಕಟ್ಟುವ ಹಂತಕ್ಕೆ ಬಂದಿದ್ದು, ಆದರೆ ಈಗ ಬೆಳೆಗೆ ಹಳದಿ ನಂಜಾಣು ರೋಗ ಕಾಣಿಸಿಕೊಂಡಿರುವುದು ರೈತರಲ್ಲಿ ಆತಂಕ ಮನೆ ಮಾಡಿದೆ.

ಹೆಸರು ಬೆಳೆಯ ಎಲೆಯ ಮೇಲೆ ಹಳದಿ ಬಣ್ಣದ ಚುಕ್ಕೆಗಳು ಕಂಡು ಬರುತ್ತಿದ್ದು, ಇದರಿಂದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಇಳುವರಿ ಕಡಿಮೆಯಾಗುವ ಅಪಾಯವಿದೆ. ಹಳದಿ ನಂಜಾಣು ರೋಗಕ್ಕೆ ಹುಳು-ಕೀಟ ವೈಟ್ ಪ್ಲೇ (ಬಿಳಿನೊಣ) ಕಾರಣವಾಗಿದ್ದು, ಒಂದು ಗಿಡದಿಂದ ಇನ್ನೊಂದು ಗಿಡಕ್ಕೆ ಹೋಗಿ ರಸ ಹೀರುವುದರಿಂದ ಈ ವೈರಾಣು ಗಿಡದಿಂದ ಗಿಡಕ್ಕೆ ಹರಡುತ್ತದೆ. ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಕಾಯಿ ಬಿಡುವ ಹಂತದಲ್ಲಿ ಈಗ ಹಳದಿ ರೋಗ ಕಾಣಿಸಿಕೊಂಡಿದೆ ಎಂದು ರೈತ ಮಾನಪ್ಪ ಆತಂಕ ವ್ಯಕ್ತಪಡಿಸಿದರು.

ಕಳೆದ ಮೂರ್ನಾಲ್ಕು ದಿನಗಳಿಂದ ಹವಾಮಾನದಲ್ಲಿ ವ್ಯತ್ಯಾಸ ಕಾಣುತ್ತಿದೆ. ಇದರಿಂದ ಕೀಟಬಾಧೆ ಕಾಣಿಸುವ ಸಾಧ್ಯತೆ ಇದೆ. ಕೃಷಿ ಇಲಾಖೆಯು ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ರೈತರು ಬೆಳೆ ರಕ್ಷಿಸಬೇಕು’ ಎಂದು ರೈತ ಮುಖಂಡ ತಿಮ್ಮಣ್ಣ ಚೌಡಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.