ನಾಗಮಂಗಲ: ತಾಲ್ಲೂಕಿನ ಬೆಳ್ಳೂರು ಹೋಬಳಿಯ ಕಂಚಿನಕೋಟೆ ಗ್ರಾಮದ ಸಮೀಪ ರೈಲ್ವೆ ಹಳಿಯಲ್ಲಿ ನಡೆದು ಹೋಗುತ್ತಿದ್ದ ಕರಡಿಗೆ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದೆ.

ಮಂಗಳವಾರ ಬೆಳಿಗ್ಗೆ ಹಳಿಯ ಬಳಿ ಸುಮಾರು 6-7 ವರ್ಷದ ಗಂಡು ಕರಡಿ ಮೃತಪಟ್ಟಿದ್ದು, ಅದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಎಸಿಎಫ್ ಶಿವರಾಮು ಮತ್ತು ಆರ್ಎಫ್ಒ ಮಂಜುನಾಥ್ ಪರಿಶೀಲನೆ ನಡೆಸಿದರು. ಅಲ್ಲದೇ ಕರಡಿಯ ಕಳೇಬರವನ್ನು ಪಶು ವೈದ್ಯ ಭೀಷಜಮೂರ್ತಿ ಅವರು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸುಡಲಾಯಿತು.

ಸ್ಥಳದಲ್ಲಿ ಡಿಆರ್ ಎಫ್ಒ ಮಂಜುನಾಥ್, ಪ್ರಕಾಶ್ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.