ಭಾರತೀನಗರ: ರೈತರ ಬೇಡಿಕೆಗಳ ಈಡೇರಿಕೆಗಾಗಿ ಬೆಳೆಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಸಂಸ್ಥಾಪಕ ಅಧ್ಯಕ್ಷ ಪಚ್ಚೆ ನಂಜುಡಸ್ವಾಮಿ ತಿಳಿಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆದ ಏಕೀಕೃತ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ರೈತರಿಗೆ ಆಗುತ್ತಿರುವ ಅನ್ಯಾಯ, ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಜಿಲ್ಲೆಯಿಂದ ಕನಿಷ್ಠ 10 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಿ ಅಧಿವೇಶನದ ಯಶಸ್ಸಿಗೆ ಕಾರಣರಾಗಬೇಕು’ ಎಂದು ಮನವಿ ಮಾಡಿದರು.

‘1980ರ ದಶಕದಲ್ಲಿ ಕಂಪನ ಉಂಟುಮಾಡಿದ್ದ ಕರ್ನಾಟಕ ರಾಜ್ಯ ರೈತ ಸಂಘ ಇತ್ತೀಚಿನ ವರ್ಷಗಳಲ್ಲಿ ತಾತ್ವಿಕ ಭಿನ್ನಾಪ್ರಾಯದಿಂದ ಹಲವು ಬಣಗಳಾಗಿದ್ದು, ಸಂಘಟನೆಯ ಬಲ ಕುಸಿದಿದೆ. ರೈತ ಸಂಘದ ಏಕೀಕರಣದ ಮೂಲಕ ಎಲ್ಲಾ ಬಣಗಳನ್ನು ಒಂದೇ ವೇದಿಕೆಯಲ್ಲಿ ಕರೆತಂದು ಸಂಘಟಿಸಲಾಗುವುದು. ಇದು ಮಹತ್ತರ ಬೆಳವಣಿಗೆಯಾಗಲಿದೆ’ ಎಂದು ಹೇಳಿದರು.

‘ರೈತರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದ ಪ್ರೊ.ಎಂ.ಡಿ. ನಂಜುಂಡಸ್ವಾಮಿ, ಕೆ.ಎಸ್. ಪುಟ್ಟಣ್ಣಯ್ಯ ಅವರನ್ನು ನಾವು ಎಂದಿಗೂ ಮರೆಯುವಂತಿಲ್ಲ. ಅವರ ಸಂಘಟನೆಯ ಹಾದಿಯಲ್ಲೇ ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಹೆಸರಿನಲ್ಲಿ ರೈತರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ರೈತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಲಾಗುವುದು’ ಎಂದರು.

ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಬೆಂಬಲಕ್ಕೆ ನಿಲ್ಲುವುದಾಗಿ ಭಾರತೀನಗರ ರೈತ ಸಂಘದ ಪದಾಧಿಕಾರಿಗಳು ತಿಳಿಸಿದರು. ಸಂಘದ ಮದ್ದೂರು ತಾಲ್ಲೂಕು ಘಟಕದಿಂದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಂಘದ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ವಿದ್ಯಾಪ್ರಸಾದ್, ಹಿರಿಯ ಮುಖಂಡರಾದ ರಾಮಕೃಷ್ಣಯ್ಯ, ಸೀತಾರಾಮು, ಸೋ.ಶಿ. ಪ್ರಕಾಶ್, ಪ್ರಭು, ಪಣ್ಣೇದೊಡ್ಡಿ ವೆಂಕಟೇಶ್, ಕೊತ್ತನಹಳ್ಳಿ ಉಮೇಶ್, ಅಣ್ಣೂರು ಮಹೇಂದ್ರ, ಕುರಿಕೆಂಪನದೊಡ್ಡಿ ರಾಮಲಿಂಗಯ್ಯ, ನ.ಲಿ.ಕೃಷ್ಣ, ಕೆ.ಪಿ. ದೊಡ್ಡಿ ಪುಟ್ಟಸ್ವಾಮಿ, ಮಂಡ್ಯ ತಾಲ್ಲೂಕು ಘಟಕದ ಅಧ್ಯಕ್ಷ ಮರಿಚನ್ನಯ್ಯ, ಕ್ಯಾತಘಟ್ಟ ಬಿಳಿಯಪ್ಪ ಸೇರಿದಂತೆ ಮತ್ತಿತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.