ಮಂಡ್ಯ: ತಾಲ್ಲೂಕಿನ ಹೊನಗಾನಹಳ್ಳಿ ಮಠ ಗ್ರಾಮದ ಬಳಿ ವಿಶ್ವೇಶ್ವರಯ್ಯ ನಾಲೆಯಲ್ಲಿ ಕೊಚ್ಚಿಹೋಗಿದ್ದ ಸಬಿನ್ ರಾಜ್ (4) ಮೃತದೇಹ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.

ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ನಾಲೆಯ ಪಕ್ಕ ಆಟವಾಡುತ್ತಿದ್ದ ಬಾಲಕ ನಾಪತ್ತೆಯಾಗಿದ್ದ.

ನಾಲೆಯಲ್ಲಿ ಕೊಚ್ಚಿ ಹೋಗಿರಬಹುದು ಎಂಬ ಶಂಕೆಯಿಂದ ಬಾಲಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದರು.

ಗುರುವಾರ ರಾತ್ರಿ 9 ಗಂಟೆಯವರೆಗೂ ಕಾರ್ಯಾಚರಣೆ ನಡೆದಿತ್ತು.

ಶುಕ್ರವಾರ ನಾಲೆಯಲ್ಲಿ ನೀರು ಸ್ಥಗಿತಗೊಂಡ ಕಾರಣ, ನಾಲೆಗೆ ಬಿದ್ದಿದ್ದ ಸ್ವಲ್ಪ ದೂರದಲ್ಲೇ ಬಾಲಕನ ಶವ ಪತ್ತೆಯಾಗಿದೆ ಎಂದು ಮಂಡ್ಯ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.