ಮಂಡ್ಯ: ‘ಬಿಪಿಎಲ್ ಕಾರ್ಡ್ದಾರರ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳ ಹೆಸರು ಕೈಬಿಟ್ಟು ಹೋಗಿದ್ದು, ಇನ್ನೊಂದು ವಾರದ ಒಳಗೆ ಅವರ ಹೆಸರುಗಳನ್ನು ಪುನರ್ ಸೇರ್ಪಡೆ ಮಾಡಲಾಗುವುದು’ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ನಗರದಲ್ಲಿ ಸ್ವಂತ ಮನೆಯುಳ್ಳವರು, ಕಾರು ಹೊಂದಿರುವವರು, ಆದಾಯ ತೆರಿಗೆ ಪಾವತಿಸುವ ಲಕ್ಷಾಂತರ ಜನರು ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದರು. ಇಂಥವರನ್ನು ಅನರ್ಹಗೊಳಿಸುವ ಸಂದರ್ಭದಲ್ಲಿ ಕೆಲ ಅರ್ಹ ಫಲಾನುಭವಿಗಳ ಹೆಸರುಗಳು ಸಹ ಬಿಪಿಎಲ್ ಕಾರ್ಡ್ ಪಟ್ಟಿಯಿಂದ ಕೈಬಿಟ್ಟು ಹೋಗಿದ್ದು, ಇದನ್ನು ಸರಿಪಡಿಸಲು ಆಹಾರ ಇಲಾಖೆ ಹಾಗೂ ಆಯೋಗ ಮುಂದಾಗಿದೆ’ ಎಂದು ಸ್ಪಷ್ಟಪಡಿಸಿದರು.

ಈ ಬಗ್ಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ಚರ್ಚೆ ನಡೆಸಿದ್ದು, ಅಧಿಕಾರಿಗಳು ಸರಿಪಡಿಸಲು ಎರಡು ದಿನ ಸಮಾಯಾವಕಾಶ ಕೇಳಿದ್ದಾರೆ. ಆದರೆ ನಾವು ಒಂದು ವಾರವೇ ಸಮಯ ನೀಡಿದ್ದು, ಒಟ್ಟಿನಲ್ಲಿ ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಕಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಹಾಸ್ಟೆಲ್, ಹೋಟೆಲ್ಗಳಲ್ಲಿ ವಿದ್ಯಾರ್ಥಿಗಳು ಮತ್ತು ಗ್ರಾಹಕರಿಗೆ ಗುಣಮಟ್ಟದ ಆಹಾರ ಸಿಗಬೇಕೆಂಬುದು ಆಹಾರ ಆಯೋಗದ ಧ್ಯೇಯವಾಗಿದೆ. ಆ ನಿಟ್ಟಿನಲ್ಲಿ ನನ್ನ ನೇತೃತ್ವದಲ್ಲಿ ಆಯೋಗದ ಸದಸ್ಯರು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದು, ಎಲ್ಲೆಲ್ಲಿ ನ್ಯೂನತೆ ಕಂಡು ಬಂದಿದೆಯೋ ಅಲ್ಲಿ ಕೆಲವರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಕೆಲವರಿಗೆ ಎಚ್ಚರಿಕೆಯ ನೋಟಿಸ್ ನೀಡಲಾಗಿದೆ ಎಂದರು.

ತಪ್ಪಿತಸ್ಥರಿಗೆ ಮತ್ತೊಂದು ಅವಕಾಶ:

ಮಂಡ್ಯದ ಬೂದನೂರಿನಲ್ಲಿರುವ ಪೌಷ್ಟಿಕ ಆಹಾರ ತಯಾರಿಕಾ ಘಟಕದಲ್ಲಿ ಅಧಿಕಾರಿಗಳು ಆಹಾರ ಗುಣಮಟ್ಟದಲ್ಲಿ ಲೋಪ ಎಸಗಿದ್ದರಿಂದ ಕಳೆದ ಬಾರಿ ಭೇಟಿ ನೀಡಿದ್ದಾಗ ಐದು ಮಂದಿಯನ್ನು ಅಮಾನತು ಮಾಡಲಾಗಿತ್ತು. ಆದರೆ, ಮತ್ತೆ ಅಲ್ಲಿಗೆ ತೆರಳಿ ಮರುಪರಿಶೀಲಿಸುವ ಸಂದರ್ಭದಲ್ಲಿ ಅಧಿಕಾರಿಗಳು ತಪ್ಪೊಪ್ಪಿಗೆ ಪತ್ರ ನೀಡಿರುವುದರಿಂದ ಅವರಿಗೆ ಮತ್ತೊಂದು ಅವಕಾಶ ನೀಡಿ, ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಆಹಾರ ಗುಣಮಟ್ಟದಲ್ಲಿ ಮತ್ತೆ ಲೋಪ ಎಸಗಿದರೆ ನಿಮ್ಮ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ ಬಂದಿದ್ದೇನೆ ಎಂದು ಹೇಳಿದರು.

ಮಂಡ್ಯ ಮಾತ್ರವಲ್ಲದೇ ಪೌಷ್ಟಿಕ ಆಹಾರ ತಯಾರಿಕಾ ಘಟಕ ಜಿಲ್ಲೆಯ ಪಾಂಡವಪುರ, ಮದ್ದೂರು, ಮಳವಳ್ಳಿಯಲ್ಲಿದ್ದು, ಶೀಘ್ರವೇ ಅಲ್ಲಿಗೂ ಸಹ ಭೇಟಿ ಕೊಟ್ಟು ಆಹಾರದ ಗುಣಮಟ್ಟವನ್ನು ಪರಿಶೀಲನೆ ನಡೆಸುವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಘಟಕಗಳಿಗೂ ಭೇಟಿ ಕೊಟ್ಟು ಲೋಪದೋಷಗಳಿದ್ದರೆ ಅವುಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುವೆ ಎಂದು ಸ್ಪಷ್ಟಪಡಿಸಿದರು

ಮಿಮ್ಸ್: ಆಹಾರ ತಯಾರಿಕೆಗೆ ಟೆಂಡರ್

‘ಕಳೆದ ತಿಂಗಳು ಮಂಡ್ಯ ಮಿಮ್ಸ್ ನಲ್ಲಿ ಭೇಟಿ ನೀಡಿದಾಗ ಅಲ್ಲಿನ ಆಹಾರ ಘಟಕದಲ್ಲಿ ಆಹಾರವನ್ನು ತಯಾರಿಸಿ ರೋಗಿಗಳಿಗೆ ನೀಡುವಂತೆ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ತಿಳಿಸಲಾಗಿತ್ತು. ಈ ಸಂಬಂಧ ಇಲಾಖೆಯು ಟೆಂಡರ್ ಕರೆಯಲಾಗಿದ್ದು ಪ್ರಕ್ರಿಯೆ ಹಂತದಲ್ಲಿದೆ’ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ತಿಳಿಸಿದರು. ಜಿಲ್ಲೆಯಲ್ಲಿರುವ ಅನೇಕ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಚಿವರು ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳನ್ನೊಳಗೊಡಂತೆ ಸಭೆ ನಡೆಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಪಿ.ಎಸ್. ಆಶಾ ಮಂಡ್ಯ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಕೆ. ಕುಮಾರಸ್ವಾಮಿ ಮಾಜಿ ನಗರಸಭೆ ಸದಸ್ಯ ಅಮ್ಜದ್ ಪಾಷಾ ಮುಖಂಡರಾದ ಸೋಮು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.