ಮಳವಳ್ಳಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರಿಂದ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.

ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ಕ್ಷೇತ್ರಗಳ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೇ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪರ ಘೋಷಣೆ ಕೂಗಿ ಸಂಭ್ರಮಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರಿಗೆ ಉಪಚುನಾವಣೆಯ ಫಲಿತಾಂಶ ತಕ್ಕ ಉತ್ತರ ನೀಡಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿ, ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ಮಾತನಾಡಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಚನ್ನಪಟ್ಟಣ ತಾಲ್ಲೂಕಿನ ಹಲವು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಜವಾಬ್ದಾರಿಯನ್ನು ತೆಗೆದುಕೊಂಡು ಸತತ 15 ದಿನಗಳ ಕಾಲ ನಿರಂತರವಾಗಿ ಪ್ರಚಾರ ನಡೆಸಿ ಕಾಂಗ್ರೆಸ್ ಗೆ ಹೆಚ್ಚು ಮತ ಬರುವಲ್ಲಿ ಶ್ರಮಿಸಿದ್ದಾರೆ ಎಂದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಮಾತನಾಡಿ, ಮೂರು ಕ್ಷೇತ್ರಗಳ ಜನರಿಗೆ ಧನ್ಯವಾದ ಅರ್ಪಿಸಿದರು. ಪುರಸಭೆ ಸದಸ್ಯರಾದ ಎಂ.ಎನ್.ಶಿವಸ್ವಾಮಿ, ಎಂ.ಆರ್.ರಾಜಶೇಖರ್, ಪ್ರಮೀಳಾ, ಎಂ.ಸಿ.ಸಂತೋಷ್, ಆನಂದ್ ಕುಮಾರ್, ಮಾರೇಹಳ್ಳಿ ಬಸವರಾಜು, ಐಯೂಬ್ ಪಾಷ, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ.ದೇವರಾಜು, ಕೆ.ಎಸ್.ದ್ಯಾಪೇಗೌಡ, ಎಂ.ಲಿಂಗರಾಜು, ಪ್ರಕಾಶ್, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಮುಖಂಡರಾದ ಸಿ.ಮಾಧು, ಶಿವಮಾದೇಗೌಡ, ಕಿರಣ್ಶಂಕರ್, ಸುರೇಶ್, ಶಾಂತರಾಜು, ರೋಹಿತ್ ಗೌಡ (ದೀಪು), ಶಿವಮೂರ್ತಿ, ಅಖಿಲ್, ಬಂಕ್ ಮಹದೇವು, ಶಿವಕುಮಾರ್, ಚೇತನ್ ನಾಯಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.