ಮಂಡ್ಯ: ‘ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಸದ್ಯಕ್ಕೆ ಬದಲಾವಣೆ ಇಲ್ಲ. ಈ ಬಗ್ಗೆ ಚರ್ಚಿಸುವ ಪ್ರಶ್ನೆಯೂ ನಮ್ಮ ಮುಂದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದವರು ಯಾರು, ಈಗ ಯಾರು ಚರ್ಚೆ ಮಾಡುತ್ತಿದ್ದಾರೆ? ಮುಂದೆ ಅವಕಾಶ ಸಿಕ್ಕರೆ ಮಾತನಾಡೋಣ’ ಎಂದರು.

‘ಸದ್ಯಕ್ಕೆ ದಲಿತ ಮುಖ್ಯಮಂತ್ರಿ ಬಗ್ಗೆ ಚರ್ಚೆಯೂ ಇಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ’ ಎಂದು ಹೇಳಿದರು.

ಮಹರ್ಷಿ ವಾಲ್ಮೀಕಿ ಹಗರಣದ ಕುರಿತು ಪ್ರತಿಕ್ರಿಯಿಸಿದ ಅವರು, ‘ಯಾರು ಯಾರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನೋಡೋಣ. ಮೊದಲು ತನಿಖೆಯಾಗಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.