ಶ್ರೀರಂಗಪಟ್ಟಣ: ತಾಲ್ಲೂಕಿನ ಪಾಲಹಳ್ಳಿ ಮತ್ತು ಹೊಸಹಳ್ಳಿ ನಡುವೆ ಶನಿವಾರ ಸಂಜೆ ಕಾರು ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಗಂಭೀರವಾಗಿ ಗಾಯಗೊಂಡಿರುವ ಬಾಲ ನಟ ರೋಹಿತ್ಗೆ ಭಾನುವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ರೋಹಿತ್ ಅವರ ದವಡೆಗೆ ಬಲವಾದ ಪೆಟ್ಟು ಬಿದ್ದಿದ್ದು, ಹಲ್ಲುಗಳು ಮುರಿದಿವೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ರೋಹಿತ್ ಅವರ ಸಂಬಂಧಿಕರು ತಿಳಿಸಿದ್ದಾರೆ.

ಘಟನೆಯಲ್ಲಿ ರೋಹಿತ್ ಅವರ ತಾಯಿ ಛಾಯಾಲಕ್ಷ್ಮಿ ಅವರ ಎರಡು ಕಾಲುಗಳು ಹಾಗೂ ಒಂದು ಕೈ ಮುರಿದಿದೆ. ಅವರನ್ನು ಭಾನುವಾರ ಮಧ್ಯಾಹ್ನ ಮೈಸೂರು ಆಸ್ಪತ್ರೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರೋಹಿತ್ ಜತೆ ಕಾರಿನಲ್ಲಿದ್ದ ಅವರ ಸ್ನೇಹಿತ ಯಶಸ್, ಆರಾಧನಾ ಕಾಲೇಜಿನ ಉಪನ್ಯಾಸಕರಾದ ಕೇಶವ್ ಮತ್ತು ಶ್ರೀಕಾಂತ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಶಾಲೆಯೊಂದರ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಮತ್ತು ತಾಲ್ಲೂಕಿನ ಹೊಸಹಳ್ಳಿ ಬಳಿಯ ಆರಾಧನಾ ಕಾಲೇಜಿನ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ರೋಹಿತ್ ಇತರರು ಇದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿತ್ತು.

ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.