ಕಿಕ್ಕೇರಿ: ಹೋಬಳಿಯ ಸಾಸಲು ಗ್ರಾಮದ ಮುಜರಾಯಿ ಇಲಾಖೆಯ ಸೋಮೇಶ್ವರ, ಶಂಭುಲಿಂಗೇಶ್ವರ ದೇಗುಲದ ಹುಂಡಿ ಎಣಿಕೆ ಕಾರ್ಯಕ್ರಮ ಬುಧವಾರ ನಡೆದಿದ್ದು, ₹11.23 ಲಕ್ಷ ಸಂಗ್ರಹವಾಗಿದೆ.

ತಹಶೀಲ್ದಾರ್ ಅಶೋಕ್ ಅವರ ಮಾರ್ಗದರ್ಶನದಲ್ಲಿ ಉಪತಹಶೀಲ್ದಾರ್ ವೀಣಾ ನೇತೃತ್ವದಲ್ಲಿ ಜರುಗಿದ ಹುಂಡಿ ಎಣಿಕೆಯಲ್ಲಿ ಎರಡು ದೇಗುಲಗಳಿಂದ ಒಟ್ಟು ₹11,23,318 ರೂಪದಲ್ಲಿ ಹಣ ಸಂಗ್ರಹವಾಗಿದ್ದು, ಇದರ ಜೊತೆಯಲ್ಲಿ 3 ಗ್ರಾಂ ಚಿನ್ನದ ಉಂಗುರ ಹಾಗೂ 300 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದರು.

ಸೋಮೇಶ್ವರ ಹಾಗೂ ಶಂಭುಲಿಂಗೇಶ್ವರ ಬಾಲಾಲಯ ದೇಗುಲದಲ್ಲಿರುವ ಒಟ್ಟು 22 ಹುಂಡಿಗಳನ್ನು ಬೆಳಗ್ಗಿನಿಂದ ಸಂಜೆಯವರೆಗೆ ಕಿಕ್ಕೇರಿ ಪೊಲೀಸರ ಸರ್ಪಗಾವಲಿನಲ್ಲಿ ಎಣಿಕೆ ಮಾಡಲಾಯಿತು.

ರಾಜಸ್ವ ನಿರೀಕ್ಷಕ ಡಿ.ಆರ್. ನರೇಂದ್ರ, ಗ್ರಾಮ ಆಡಳಿತಾಧಿಕಾರಿ ಬಿ.ಎಂ. ಪ್ರಸನ್ನ, ಸೋಮಾಚಾರ್, ತಿಪ್ಪೇಶ್, ಸುನೀಲ್ ಗಾಣಿಗೇರ್, ಹರ್ಷಿತಾ, ವನಜಾಕ್ಷಿ ಮುಜರಾಯಿ ಸಹಾಯಕಿ ಪೂರ್ಣಿಮಾ, ಸಹಾಯಕರು, ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.