ಮಂಡ್ಯ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವ ಕಾರಣ, ಕೆಆರ್ಎಸ್ ಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ಬಿಡುತ್ತಿದ್ದು, ಕಾವೇರಿ ನದಿಯು ಉಕ್ಕಿ ಹರಿಯುತ್ತಿದೆ.

ಪ್ರವಾಸಿಗರ ಹಿತದೃಷ್ಟಿಯಿಂದ ಜುಲೈ 19ರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರವನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರಂಗನತಿಟ್ಟು ಪಕ್ಷಿಧಾಮದ ವೀಕ್ಷಣೆಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.