ಮಳವಳ್ಳಿ: ‘ಬರಗಾಲದ ಸಂಕಷ್ಟದಲ್ಲಿ ಇರುವ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸಬೇಕು’ ಎಂದು ತಾಲ್ಲೂಕು ಪಂಚಾಯತಿ ಆಡಳಿತಾಧಿಕಾರಿ ಎಸ್.ಟಿ.ಸಿದ್ದಲಿಂಗೇಶ್ ಬೇವಿನಮಟ್ಟಿ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸರ್ಕಾರದ ‘ಗ್ಯಾರಂಟಿ’ ಯೋಜನೆ ತಲುಪುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಪಡಿತರ ಚೀಟಿ ಹೊಂದದವರ ಸರ್ವೆ ನಡೆಸಿ ಕಾರಣಗಳನ್ನು ಕಂಡುಕೊಂಡು ಪರಿಹಾರ ದೊರಕಿಸಬೇಕು. ಅಲ್ಲದೇ ಬರಗಾಲದ ಪರಿಸ್ಥಿತಿ ಎದುರಿಸಲು ಶಾಸಕರು ನೀಡಿರುವ ಸಲಹೆ-ಸೂಚನೆಗಳನ್ನು ಎಲ್ಲ ಇಲಾಖೆಗಳ ಅಧಿಕಾರಿಗಳು ಪಾಲಿಸಬೇಕು’ ಎಂದು ಹೇಳಿದರು.

‘ಕಳೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ನೀಡಿದ ಸೂಚನೆಗಳನ್ನು ಎಲ್ಲರೂ ಕಡ್ಡಾಯವಾಗಿ ಅನುಸರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚುರುಕು ನೀಡಬೇಕು’ ಎಂದು ಸೂಚನೆ ನೀಡಿದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪಿ.ಎಸ್.ದೀಪಕ್ ಮಾತನಾಡಿ, ಕಳೆದ ಸಾಲಿನಲ್ಲಿ 900 ಇದ್ದ ಬೆಳೆ ವಿಮೆಯ ಫಲಾನುಭವಿಗಳ ಸಂಖ್ಯೆಯನ್ನು ಈ ಬಾರಿ 7,600ಕ್ಕೆ ಹೆಚ್ಚಿಸಲಾಗಿದೆ. ಸುಮಾರು 4 ಸಾವಿರ ಮಂದಿ ಹುರುಳಿ ಬೆಳೆ ಹಾಕಿದ್ದಾರೆ ಎಂದು ಮಾಹಿತಿ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಾ ಮಾತನಾಡಿ, ‘ಗೃಹಲಕ್ಷ್ಮಿ’ ಯೋಜನೆಗೆ ತಾಲ್ಲೂಕಿನ 77,590 ಮಂದಿಯನ್ನು ಗುರುತಿಸಿದ್ದು, ಅವರಲ್ಲಿ 69,400ಕ್ಕೂ ಅಧಿಕ ಮಂದಿಯ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸರ್ವೆ ನಡೆಸಿ ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಮಾಹಿತಿ ನೀಡಿದರು.

ತಾ.ಪಂ.ಇಒ ಎಲ್.ಮಮತಾ ಮಾತನಾಡಿ, ‘ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ, ಬೆಲೆ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಯ ಅಧಿಕಾರಿಗಳು ಕೆಲಸ ಮಾಡಬೇಕು. ತಂತ್ರಜ್ಞಾನ ಬಳಕೆಯ ಬಗ್ಗೆಯೂ ಸಮರ್ಪಕ ಪ್ರಚಾರ ಕಾರ್ಯ ನಡೆಸಬೇಕು. ಎಲ್ಲೆಡೆ ಕಾಡುತ್ತಿರುವ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸರ್ವೆ ನಡೆಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಸೂಚನೆ ನೀಡಿದರು.

ತಾ.ಪಂ.ಯೋಜನಾಧಿಕಾರಿ ದೀಪು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.