ಮಂಡ್ಯ: ಸಂಸದೆ ಸುಮಲತಾ ಅವರ ಸಂಪರ್ಕಕ್ಕೆ ಬಂದಿದ್ದ ಅವರ ಬೆಂಗಲಿಗರು, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕೋವಿಡ್ ಪರೀಕ್ಷಾ ವರದಿಯಲ್ಲಿ ಬುಧವಾರ ನೆಗೆಟಿವ್ ಫಲಿತಾಂಶ ಬಂದಿದೆ.

ಸುಮಲತಾ ಅವರು ಜುಲೈ ತಿಂಗಳ ಮೊದಲ ವಾರ ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅವರೊಂದಿಗೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡವರಿಗೆ ಕೋವಿಡ್ ಭೀತಿ ಎದುರಾಗಿತ್ತು. ಹೀಗಾಗಿ ಮಂಗಳವಾರ ಅವರ ಬೆಂಬಲಿಗರು ಸಾಮೂಹಿಕವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಬುಧವಾರ ಬಂದ ವರದಿಯಲ್ಲಿ ಎಲ್ಲರಿಗೂ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸುಮಲತಾ ಅವರ ಪಿಎಗಳು ಸೇರಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳಿಗೆ ನೆಗೆಟಿವ್ ಬಂದಿದೆ. ಸುಮಲತಾ ಅವರಿಗೆ ಮಂಡ್ಯದಲ್ಲಿ ಸೋಂಕು ಬಂದಿಲ್ಲ, ಬೆಂಗಳೂರಿನಲ್ಲೇ ಬಂದಿರುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

606ಕ್ಕೆ ಏರಿಕೆ: ಬುಧವಾರ ಒಂದೇ ದಿನ 20 ಮಂದಿಯಲ್ಲಿ ಕೋವಿಡ್–19 ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆಯಾಗಿದೆ. ಬೆಂಗಳೂರು, ಮೈಸೂರು ಜಿಲ್ಲೆಗಳಿಂದ ಬಂದ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ. ಹಲವರಿಗೆ ಸೋಂಕಿನ ಮೂಲ ಪತ್ತೆಯಾಗಿಲ್ಲ, ಅಧಿಕಾರಿಗಳು ಮೂಲ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ಒಟ್ಟು ಸೋಂಕಿತರಲ್ಲಿ 383 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 220 ಪ್ರಕರಣಗಳು ಸಕ್ರಿಯವಾಗಿವೆ. ಬುಧವಾರ ಸೋಂಕು ಪತ್ತೆಯಾದ ಐವರಲ್ಲಿ ರೋಗ ಲಕ್ಷಣಗಳು (ಐಎಲ್ಐ) ಕಂಡುಬಂದಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ತಾಲ್ಲೂಕಿನಲ್ಲಿ 13 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ನಗರದಲ್ಲೂ ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಬುಧವಾರದ ಸೋಂಕಿತರ ವಿವರ

ಮಂಡ್ಯ– 12
ಮದ್ದೂರು 03
ಪಾಂಡವಪುರ– 02
ಕೆ.ಆರ್.ಪೇಟೆ– 01
ಮಳವಳ್ಳಿ–01
ಶ್ರೀರಂಗಪಟ್ಟಣ– 01
ನಾಗಮಂಗಲ– 00
ಒಟ್ಟು– 20

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.