ಭಾರತೀನಗರ: ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬ ಮಂಡ್ಯ ಜಿಲ್ಲೆಯ ಜನರನ್ನು ವಂಚಿಸುತ್ತಲೇ ರಾಜಕಾರಣ ಮಾಡುತ್ತಿದೆ’ ಎಂದು ಶಾಸಕ ಕೆ.ಎಂ.ಉದಯ್ ಆರೋಪಿಸಿದರು.

ಸಮೀಪದ ಚಂದೂಪುರ ಗ್ರಾಮದಲ್ಲಿ ಭಾರತೀನಗರ ಜಿ.ಪಂ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣಗೌಡ) ಪರ ತೆರೆದ ವಾಹನದಲ್ಲಿ ಪ್ರಚಾರ ನಡೆಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯಿಂದ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಜಾ.ದಳ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ₹1,800 ಕೋಟಿ ರೂಪಾಯಿಗಳ ಪ್ಯಾಕೇಜ್ ನೀಡಿರುವುದಾಗಿ ಘೋಷಣೆ ಮಾಡಿದರು. ಕಾಮಗಾರಿಗಳ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ರಾಜ್ಯದ ಮುಖ್ಯಮಂತ್ರಿಯಾಗಿ ಕಾಮಗಾರಿಗೆ ಹಣ ಬಿಡುಗಡೆಯಾಗದೆ ಹೇಗೆ ಶಂಕುಸ್ಥಾಪನೆ ನೆರವೇರಿಸಿದರು? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣಗೌಡ), ಮಾಜಿ ಸಚಿವ ಬಿ.ಸೋಮಶೇಖರ್. ಎ.ಎಸ್.ರಾಜೀವ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.