ಮಂಡ್ಯ: ಜನ ಸಾಮಾನ್ಯರಿಗೆ ಕಣ್ಣಿನ ಸಮಸ್ಯೆ ಬಗ್ಗೆ ಅರಿವಿನ ಕೊರತೆಯಿದ್ದು ಅದನ್ನು ತಿಳಿಸುವ ಅವಶ್ಯಕತೆಯಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಕ್ರಮ ರೂಪಿಸಬೇಕು. ಇದರಿಂದ ಅಂಧತ್ವ ನಿವಾರಣೆ ಪ್ರಮಾಣ ತಗ್ಗಿಸಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಆಶಾಕಿರಣ’ ಫಲಾನುಭವಿಗಳಿಗೆ ಕನ್ನಡಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಆಶಾಕಿರಣ ಕಣ್ಣಿನ ಆರೈಕೆ ಯೋಜನೆಯಡಿ 9,260 ಜನರಿಗೆ ಕನ್ನಡಕ ವಿತರಣೆ ಮಾಡಲಾಗಿದೆ. ನವೆಂಬರ್ ಅಂತ್ಯದೊಳಗೆ ಉಳಿಕೆ 81,020 ಜನರಿಗೆ ವಿತರಿಸಲಾಗುವುದು ಎಂದರು.

ಜನರಿಗೆ ದೃಷ್ಟಿ ಸಮಸ್ಯೆ ಚಿಕಿತ್ಸಗೆ ಆರ್ಥಿಕ ಪರಿಸ್ಥಿತಿಯ ತೊಂದರೆ ಇರುತ್ತದೆ. ಆರೋಗ್ಯ ಇಲಾಖೆ ಸಿಬ್ಬಂದಿ ಅರಿವು ಮೂಡಿಸಿ, ಕಣ್ಣಿನ ತಪಾಸಣೆ ಮಾಡಿ , ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ, ಕಣ್ಣಿನಪೊರೆ ಶಸ್ತ್ರ ಚಿಕಿತ್ಸೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ಮೂಲಕ ಮಂಡ್ಯ ಜಿಲ್ಲೆಯ 18,06,589 ಜನರಿಗೆ ನೇತ್ರ ತಪಾಸಣೆ ನಡೆಸಿದ್ದಾರೆ. 2,85,029 ಜನರಿಗೆ ಆರೋಗ್ಯ ಕೇಂದ್ರಗಳಲ್ಲಿ ದ್ವಿತೀಯ ಹಂತ ತಪಾಸಣೆ ನಡೆಸಿ, 92,080 ಜನರಿಗೆ ದೃಷ್ಟಿದೋಷ, 21,000 ಜನರಿಗೆ ಕಣ್ಣಿನ ಪೊರೆ ಸಮಸ್ಯೆ ಇರುವುದು ಕಂಡುಬಂದಿದೆ ಎಂದರು.

ಶಾಸಕ ಪಿ.ರವಿಕುಮಾರ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮುಡಾ ಅಧ್ಯಕ್ಷ ನಯೀಮ್, ಜಿಲ್ಲಾಧಿಕಾರಿ ಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿಎಚ್ಒ ಡಾ.ಮೋಹನ್, ಆರ್ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವತ್ಥ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.