ಮಂಡ್ಯ: ಕಳೆದ ಭಾನುವಾರ ಹಿಂದೂ ಜಾಗರಣಾ ವೇದಿಕೆಯು ಶ್ರೀರಂಗಪಟ್ಟಣ ಪಟ್ಟಣದಲ್ಲಿ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳಾ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಎಂಬುವರು ದೂರು ನೀಡಿದ್ದು, ಅದನ್ನು ಆಧರಿಸಿ ಐಪಿಸಿ ಸೆಕ್ಷನ್ 294, 295, 298, 354, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
.‘ಶಾಶ್ವತ ಗಂಡ’ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಡಬ್ಲ್ಯುಐಎಂ ದೂರು.
'ಮುಸ್ಲಿಂ ಮಹಿಳೆಯರ ಬಗ್ಗೆ ಪ್ರಭಾಕರ ಭಟ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಧರ್ಮಗಳ ನಡುವೆ ಗಲಭೆ, ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ನ್ಯಾಯಾಂಗ ವ್ಯವಸ್ಥೆಯನ್ನೂ ಅಣಕಿಸಿದ್ದಾರೆ' ಎಂದು ನಜ್ಮಾ ದೂರಿನಲ್ಲಿ ವಿವರಿಸಿದ್ದಾರೆ.

ಪ್ರಭಾಕರ ಭಟ್ ವಿರುದ್ಧ ಈ ಹಿಂದೆಯೂ ರಾಜ್ಯದ ಹಲವು ಠಾಣೆಗಳಲ್ಲೂ ಈ ರೀತಿಯ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಅವರ ವಿರುದ್ಧ ರೌಡಿಶೀಟ್ ತೆರೆಯಬೇಕು ಎಂದು ನಜ್ಮಾ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.