ಮಂಡ್ಯ: ಭಾರತೀನಗರ ಸಮೀಪದ ಗುರುದೇವನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.ಜೆಡಿಎಸ್ ಕಾರ್ಯಕರ್ತರಾದ ಅನಿಲ್, ಕಾರ್ತಿಕ್ ಎಂಬುವರುಘಟನೆಯಲ್ಲಿಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾತ್ರಿ 9 ಗಂಟೆಯಲ್ಲಿ ಸುಮಲತಾ ಗುರುದೇವನಹಳ್ಳಿಯಲ್ಲಿ ಪ್ರಚಾರಕ್ಕೆ ಬರಬೇಕಾಗಿತ್ತು. ಜನ ಕಾಯುತ್ತಿದ್ದರು. ಈ ವೇಳೆ ಕಾರ್ತಿಕ್ ಹಾರ್ನ್ ಮಾಡುತ್ತಾ ಬೈಕ್ನಲ್ಲಿ ಬಂದಿದ್ದಾರೆ. ನಿಧಾನವಾಗಿ ತೆರಳುವಂತೆ ಜನರು ಹೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಘರ್ಷಣೆ ಉಂಟಾಗಿದೆ. ಅನಿಲ್ ಮತ್ತು ಕಾರ್ತಿಕ್ ಗಾಯಗೊಂಡಿದ್ದಾರೆ. ಘಟನೆ ಸಂಬಂಧಭಾರತೀನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಖಿಲ್ ಭೇಟಿ: ವಿಷಯ ತಿಳಿಯುತ್ತಲೇ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. 'ಗಾಯಾಳುಗಳಿಗೆ ನ್ಯಾಯ ಕೊಡಿಸುತ್ತೇನೆ. ಕಾರ್ಯಕರ್ತರು ದುಡುಕಿನಿಂದಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು' ನಿಖಿಲ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.