ಮಂಡ್ಯ: ‘ಡಿಸೆಂಬರ್ 20, 21 ಮತ್ತು 22ರಂದು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹30 ಕೋಟಿ ಒದಗಿಸುವ ಭರವಸೆ ದೊರತಿದೆ. ಅದರ ಮಿತಿಯೊಳಗೆ ಸಂಪೂರ್ಣ ಕಾರ್ಯಕ್ರಮಗಳು ನಡೆಯಬೇಕು. ಯಾವುದೇ ಕಾರಣಕ್ಕೂ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಸಲ್ಲಿಸುವಂತಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಿದ್ದತೆ ಕುರಿತು ವಿಕಾಸಸೌಧದ ಸಭಾಂಗಣದಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರ ಉಪಸ್ಥಿತಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕೃಷಿ ಸಚಿವರು ಕಾರ್ಯಕ್ರಮದ ಸಂಘಟನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಈಗಾಗಲೇ ಬಜೆಟ್ ನಲ್ಲಿ ಘೋಷಿಸಿರುವ ಅನುದಾನಲ್ಲೇ ವ್ಯವಸ್ಥಿತವಾಗಿ ಸಮ್ಮೇಳನ ನಡೆಸಬೇಕು, ಹೆಚ್ಚು ಆರ್ಥಿಕ ಹೊರೆ ಬೀಳದಂತೆ ನಿಗದಿತ ಅನುದಾನದಲ್ಲೇ ಸಮ್ಮೇಳನ ಯಶ್ವಸಿಯಾಗಿ ನಡೆಸಬೇಕು. ಸಾಹಿತ್ಯ, ಸಾಂಸ್ಕೃತಿಕ ಶ್ರೀಮಂತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಮಹತ್ವಕ್ಕೆ ಕುಂದಾಗದಿರಲಿ:

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅತ್ಯಂತ ದೊಡ್ಡ ಐತಿಹಾಸಿಕ ಹಿನ್ನಲೆ ಇದೆ. ಇದರ ಚರಿತ್ರೆ ಹಾಗೂ ಮಹತ್ವಕ್ಕೆ ಯಾವುದೇ ಕುಂದು ಉಂಟಾಗದಂತೆ ಸಂಭ್ರಮ, ಸಾಹಿತ್ಯಿಕ ಮೌಲ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೊರತೆಯಾಗದಂತೆ ಸಂಘಟನೆಯನ್ನು ಮಾಡುವಂತೆ ಚಲುವರಾಯಸ್ವಾಮಿ ಸಲಹೆ ನೀಡಿದರು.

ಕಾರ್ಯಕ್ರಮದ ಸಂಘಟನೆಯಲ್ಲಿ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಆರ್ಥಿಕ ಹೊಣೆಗಾರಿಕೆಯನ್ನು ಸಂಪೂರ್ಣ ಜಿಲ್ಲಾಡಳಿತಕ್ಕೆ ಸೇರಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರ ಮತ್ತು ಸಹಯೋಗದೊಂದಿಗೆ ಹಿಂದೆಂದಿಗಿಂತ ವಿಜೃಂಭಣೆಯಿಂದ ಆಯೋಜಿಸುವಂತೆ ತಿಳಿಸಿದರು.

26 ಉಪಸಮಿತಿ ರಚನೆ:

ಈಗಾಗಲೇ 26 ಉಪಸಮಿತಿಗಳನ್ನು ರಚಿಸಲಾಗಿದೆ. ಎಲ್ಲಾ ಸಮಿತಿಗಳಿಗೂ ಸ್ಥಳೀಯ ಶಾಸಕರುಗಳು ನೇತೃತ್ವ ವಹಿಸಿದ್ದು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಕನ್ನಡದ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ನಡೆಸಬೇಕಾಗಿದೆ ಎಂದರು.

ಸ್ಥಳ ಅಂತಿಮಗೊಳಿಸಿ:

ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ದೂರದ ಜಿಲ್ಲೆಗಳಿಂದ ಆಗಮಿಸುವ ಹಾಗು ಮಂಡ್ಯ ಜಿಲ್ಲೆಯ ಜನತೆಗೆ ಅನುಕೂಲವಾದ ಸ್ಥಳವನ್ನು ಅಂತಿಮಗೊಳಿಸಿ ಸಮ್ಮೇಳನದ ಸಿದ್ದತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಕೃಷಿ ಸಚಿವರು ತಿಳಿಸಿದರು.

ಸಂಪೂರ್ಣ ಸಹಕಾರ:

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಹೇಶ್ ಜೋಶಿರವರು ಸಮ್ಮೇಳನಾಧ್ಯಕ್ಷರ ಆಯ್ಕೆ, ಕನ್ನಡ ಸಾಹಿತ್ಯ ಸಮ್ಮೇಳನದ ಸ್ವರೂಪ ಗೋಷ್ಠಿಗಳು, ಪುಸ್ತಕ ಮಳಿಗೆ, ಊಟೋಪಚಾರ ಮತ್ತಿತರೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಅನುದಾನವು ಜಿಲ್ಲಾಧಿಕಾರಿಗಳಿಗೆ ಬಿಡುಗಡೆಯಾಗಲಿದ್ದು, ಹಣಕಾಸಿನ ಸಂಪೂರ್ಣ ಜವಾಬ್ದಾರಿ ಜಿಲ್ಲಾಡಳಿತದ ಮೇಲಿರುತ್ತದೆ. ಸಾಹಿತ್ಯ ಪರಿಷತ್ತು ಸಂಪೂರ್ಣ ಸಹಕಾರ ನೀಡಿ ಸಮ್ಮೇಳನದ ಯಶಸ್ಸಿಗೆ ಶ್ರಮಿಸಲಿದೆ ಎಂದರು.

ಶಾಸಕರಾದ ನರೇಂದ್ರ ಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ರವಿಕುಮಾರ್, ಉದಯ್ ಗೌಡ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತಿ ಸಿಇಒ ಶೇಖ್ ತನ್ವೀರ್ ಆಸಿಫ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು ಹಾಜರಿದ್ದರು.

Highlights - ಖರ್ಚು-ವೆಚ್ಚಗಳಿಗೆ ಹೊಣೆಗಾರಿಕೆ ಇರಬೇಕು ಅದ್ದೂರಿ ಜೊತೆಗೆ ಪಾರದರ್ಶಕತೆ ಕಾಯ್ದುಕೊಳ್ಳಿ ಹಣಕಾಸಿನ ಜವಾಬ್ದಾರಿ ಜಿಲ್ಲಾಡಳಿತದ್ದು

Cut-off box - ‘ನುಡಿಹಬ್ಬದ ಲಾಂಛನ ಎಲ್ಲೆಡೆ ಬಿಂಬಿತವಾಗಲಿ’ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಮಾತನಾಡಿ ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಾಡಿನ ಅತಿ ದೊಡ್ಡ ಸಾಂಸ್ಕೃತಿಕ ನುಡಿ ಹಬ್ಬ. ಇದನ್ನು ಅತ್ಯಂತ ಜವಾಬ್ದಾರಿಯಿಂದ ಎಚ್ಚರಿಕೆಯಿಂದ ನಡೆಸಬೇಕಿದೆ’ ಎಂದು ಹೇಳಿದರು. ಕರ್ನಾಟಕ ರಾಜ್ಯ 50ನೇ ವರ್ಷದ ಸುವರ್ಣ ಸಂಭ್ರಮದ ಅಂಗವಾಗಿ ಬಿಡುಗಡೆ ಮಾಡಿರುವ ಲಾಂಛನ ಎಲ್ಲಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಬಿಂಬಿತವಾಗಬೇಕು. ಖರ್ಚು-ವೆಚ್ಚಗಳಿಗೆ ಹೊಣೆಗಾರಿಕೆ ಇರಬೇಕು. ಹಾಗಾಗಿ ಎಲ್ಲರೂ ಹೊಂದಾಗಿ ಕಾರ್ಯಕ್ರಮವನ್ನು ಆಯೋಜಿಸೋಣ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.