ಶುಕ್ರವಾರ, 27 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಲಗೂರು | ಶಿಕ್ಷಕರ ನೈಜ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿಲ್ಲ: ದೂರು

Published : 27 ಮೇ 2024, 13:25 IST
Last Updated : 27 ಮೇ 2024, 13:25 IST
ಫಾಲೋ ಮಾಡಿ
Comments

ಹಲಗೂರು: ‘ಕಳೆದ ನಾಲ್ಕು ಅವಧಿಯಲ್ಲಿ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಅವರು ಸದನದಲ್ಲಿ ಇತರೆ ವಿಚಾರದ ಬಗ್ಗೆ ಮಾತನಾಡಿದ್ದಾರೆಯೇ ಹೊರತು, ಇದುವರೆಗೂ ಶಿಕ್ಷಕರ ನೈಜ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಿಲ್ಲ’ ಎಂದು ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕೆ.ಅನ್ನದಾನಿ ದೂರಿದರು.

ಎನ್.ಡಿ.ಎ ಮೈತ್ರಿಕೂಟದ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಅವರ ಪರವಾಗಿ ಹಲಗೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರನ್ನು ಭೇಟಿ ಮಾಡಿ ಮತಯಾಚಿಸಿ ಅವರು ಮಾತನಾಡಿದರು.

‘ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಸುಮಾರು 1500ಕ್ಕೂ ಹೆಚ್ಚು ಮತಗಳು ತಿರಸ್ಕೃತಗೊಂಡಿದ್ದವು. ಅದ್ದರಿಂದ ಎಲ್ಲಾ ಮತದಾರರು ಮತಗಟ್ಟೆಯಲ್ಲಿ ಚುನಾವಣಾ ಸಿಬ್ಬಂದಿ ನೀಡುವ ಪೆನ್ನಿನಿಂದಲೇ ಸಂಖ್ಯೆ ಬರೆಯುವ ಮೂಲಕ ಜಾಗ್ರತೆಯಿಂದ ಮತ ಚಲಾಯಿಸಿ’ ಎಂದು ಸಲಹೆ ನೀಡಿದರು.

‘ಶಿಕ್ಷಕರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತುವ ಮೂಲಕ ಸಮಸ್ಯೆಗಳನ್ನು ಬಗೆಹರಿಸುವ ಇಚ್ಛಾಶಕ್ತಿ ಇರುವ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅವರನ್ನು ಬಾರಿ ಬಹುಮತದಿಂದ ಆಯ್ಕೆ ಮಾಡಬೇಕು’ ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಹಿಂದುಳಿದ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಜಯರಾಮು, ಹೋಬಳಿ ಘಟಕದ ಅಧ್ಯಕ್ಷ ತಮ್ಮಣ್ಣಗೌಡ, ಮೋದಿ ರವಿ, ಗ್ರಾಮ ಪಂಚಾಯತಿ ಸದಸ್ಯರಾದ ರವೀಶ್, ಸುರೇಂದ್ರ, ಮುಖಂಡರಾದ ಜಿ.ವಿ. ಕುಮಾರಸ್ವಾಮಿ, ಮಹಮದ್ ಸಲೇಹಾ, ಜಯರಾಮು, ಕೃಷ್ಣೇಗೌಡ, ಎನ್.ಕೆ.ಕುಮಾರ್, ಗಂಗಾಧರ್, ಸದಾಶಿವ ಸಿದ್ದರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT