ಮಂಡ್ಯ: ಉಗ್ರರ ದಾಳಿ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಆರ್ಎಸ್ ಜಲಾಶಯ ಸೇರಿ ವಿವಿಧ ಪ್ರವಾಸಿ ತಾಣಗಳಿಗೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬೃಂದಾವನ ಉದ್ಯಾನದಲ್ಲಿ ಶನಿವಾರ ಕೈಗಾರಿಕಾ ಭದ್ರತಾ ಪಡೆ ಜೊತೆಗೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ವಿಶೇಷ ತಪಾಸಣೆ ನಡೆಸಿದರು. ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಜಲವಿದ್ಯುತ್ ಕೇಂದ್ರ (ಬ್ಲಫ್) ದಲ್ಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಲವಿದ್ಯುತ್ಗಾರದೊಳಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

‘ಮಂಡ್ಯ ರೈಲು ನಿಲ್ದಾಣ, ಬಸ್ ನಿಲ್ದಾಣಗಳಲ್ಲೂ ಪರಿಶೀಲನೆ ಕೈಗೊಳ್ಳಲಾಗಿದೆ. ಗಗನಚುಕ್ಕಿ ಜಲಪಾತ, ಮೇಲುಕೋಟೆ, ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.