‘ಶೀಘ್ರ ಸಾರ್ವಜನಿಕರ ಸೇವೆಗೆ ಮುಕ್ತ’
ಅಕ್ಕಿಹೆಬ್ಬಾಳು ಬಸ್ ನಿಲ್ದಾಣ ಲೋಕಾರ್ಪಣೆಗೆ ಸಜ್ಜಾಗಿದೆ. ನಿಲ್ದಾಣದ ಮುಂದೆ ರಾಜ್ಯ ಹೆದ್ದಾರಿ ಇದ್ದು ಬಸ್ಗಳು ನಿಲ್ದಾಣದ ಒಳಗೆ ಹೋಗಿ ಬರಲು ಯೂ ಟರ್ನ್ ತೆಗೆದುಕೊಳ್ಳಬೇಕು. ಅದಕ್ಕಾಗಿ ರಸ್ತೆ ಸರಿಪಡಿಸಸಬೇಕಿದೆ. ಈ ಬಗ್ಗೆ ತಜ್ಞರ ತಂಡ ಪರಿಶೀಲಿಸಲಿದ್ದು ಶೀಘ್ರದಲ್ಲಿಯೇ ಕಾಮಗಾರಿ ಮುಗಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು’ ಎಂದು ಕೆ.ಆರ್.ಪೇಟೆ ಬಸ್ ಡಿಪೋ ವ್ಯವಸ್ಥಾಪಕ ಎ.ಡಿ.ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.