ಮಂಡ್ಯ: ‘ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ಮಾಡುವುದಕ್ಕಿಂತ, ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಜನ ದಂಗೆ ಏಳಬೇಕು’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ನಂತರ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿರುವುದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಜನರಿಂದಲೇ ದುಡ್ಡು ವಸೂಲಿ ಮಾಡಿ, ಜನರಿಗೆ ಹಣ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಜನ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದರು.

ಕಾಲಭೈರವನ ದರ್ಶನ ಮಾಡಿ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಒಕ್ಕಲಿಗ ಸಮಾಜ ಮತ್ತು ರಾಜ್ಯಕ್ಕೆ ಗೌರವ ತರುವಂತೆ ಕೆಲಸ ಮಾಡಲು ಶಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಗುಟ್ಟು ಬಿಟ್ಟುಕೊಡದ ಎಚ್ಡಿಕೆ:

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ, ‘ಇನ್ನೂ ಅದಕ್ಕೆ ಕಾಲಾವಕಾಶವಿದೆ ಬನ್ನಿ’ ಎಂದು ಎಚ್ಡಿಕೆ ಹೇಳುವ ಮೂಲಕ ಅಭ್ಯರ್ಥಿ ಯಾರು ಎಂಬ ಬಗ್ಗೆ ಗುಟ್ಟು ಬಿಡಕೊಡಲಿಲ್ಲ.

ಕ್ಷೇತ್ರಾಧಿ ದೇವತೆಗಳ ದರ್ಶನವನ್ನು ಕುಮಾರಸ್ವಾಮಿ ಅವರಿಗೆ ಶ್ರೀಗಳು ಮಾಡಿಸಿದರು. ಬಳಿಕ ಆದಿಚುಂಚನಗಿರಿ ಮಠಕ್ಕೆ ತೆರಳಿ ಶ್ರೀಗಳನ್ನು ಗೌರವಿಸಿ, ಆಶೀರ್ವಾದ ಪಡೆದರು. ನಂತರ ಕೆಲಕಾಲ ಶ್ರೀಗಳೊಂದಿಗೆ ಉಭಯಕುಶಲೋಪರಿ ನಡೆಸಿ, ಮಠದಲ್ಲೇ ಪ್ರಸಾದ ಸ್ವೀಕರಿಸಿದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಸುರೇಶಗೌಡ ಮತ್ತು ಜಿಲ್ಲೆಯ ಜೆಡಿಎಸ್ ನಾಯಕರು ಇದ್ದರು.
.ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಜಾರಿ; ಗ್ರಾಹಕರ ಆಕ್ರೋಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.