ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಬಂಧ ವೇದಿಕೆ ನಿರ್ಮಾಣ ಸಂಬಂಧ ಕಾಮಗಾರಿ ಕೈಗೊಳ್ಳಲು ಸ್ಯಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದ 60 ಎಕರೆ ಜಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಸಮ್ಮೇಳನಕ್ಕೆ ಕೇವಲ ಒಂದು ತಿಂಗಳು ಬಾಕಿ ಇದೆ. ಇಂದಿನಿಂದ ವೇದಿಕೆ ನಿರ್ಮಾಣದ ಚಟುವಟಿಕೆಗಳು ಪ್ರಾರಂಭವಾಗಲಿವೆ. ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿರುವ ಬಗ್ಗೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.

ಸಾಹಿತ್ಯ ಸಮ್ಮೇಳನಕ್ಕೆ ಸುಮಾರು 3 ಲಕ್ಷದಿಂದ 4 ಲಕ್ಷದವರೆಗೆ ಜನರು ಬರುವ ನಿರೀಕ್ಷೆಯಿದೆ. ಅವರಿಗೆ ಬರುವವರಿಗೆ ಊಟ, ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.
.ಮೋದಿಯ ರೈತ ವಿರೋಧಿ ನಿಲುವಿಗೆ ದೇವೇಗೌಡರ ಮೌನವೇಕೆ? –ಕೃಷಿ ಸಚಿವ ಚಲುವರಾಯಸ್ವಾಮಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.