ಮಂಡ್ಯ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಎಐಸಿಸಿ ಶನಿವಾರ ಪ್ರಕಟಿಸಿದೆ. ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮವಾಗಿಲ್ಲ.

ನಾಗಮಂಗಲ ಕ್ಷೇತ್ರದಿಂದ ಎಐಸಿಸಿ ಸದಸ್ಯ ಎನ್.ಚಲುವರಾಯಸ್ವಾಮಿ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಮಳವಳ್ಳಿಯಿಂದ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಶ್ರೀರಂಗಪಟ್ಟಣ ಕ್ಷೇತ್ರದಿಂದ ರಮೇಶ್‌ಬಾಬು ಬಂಡಿಸಿದ್ದೇಗೌಡ ಅವರ ಹೆಸರು ಘೋಷಿಸಲಾಗಿದೆ.

ಮೇಲುಕೋಟೆ ಕ್ಷೇತ್ರದಿಂದ ಕರ್ನಾಟಕ ಸರ್ವೋದಯ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಮಂಡ್ಯ ಕ್ಷೇತ್ರದಲ್ಲಿ 15 ಮಂದಿ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದು ಅಭ್ಯರ್ಥಿಯ ಹೆಸರು ಇನ್ನೂ ಅಂತಿಮವಾಗಿಲ್ಲ. ಕೆ.ಆರ್.ಪೇಟೆ, ಮದ್ದೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬೇಕಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.