ಮಂಡ್ಯ: ನಗರದಲ್ಲಿ ಶುಕ್ರವಾರ ನಡೆದ ಮಂಡ್ಯ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಗೈರಾಗಿರುವುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಜಿಲ್ಲೆಯ ಶೋಷಿತ ಸಮುದಾಯಗಳ ಮುಖಂಡರು ರಾಜ್ಯಪಾಲರಿಗೆ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟಿಸುವುದಾಗಿ ಹೇಳಿದ್ದರಿಂದ ರಾಜ್ಯಪಾಲರು ಬಂದಿಲ್ಲ’ ಎಂದು ಸಮಾರಂಭದಲ್ಲಿ ಕೆಲವರು ಚರ್ಚಿಸಿದರು.

‘ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಮಂಡ್ಯ ವಿಶ್ವವಿದ್ಯಾನಿಲಯ ನೀಡುವ ‘ಗೌರವ ಡಾಕ್ಟರೇಟ್’ಗೆ ಆಯ್ಕೆಯಾಗಿದ್ದರು. ಆದರೆ, ಈ ಇಬ್ಬರೂ ಬಾರದ ಕಾರಣ ಸಮಾರಂಭ ಕಳೆಗುಂದಿತು’ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿರುವ 7 ನೂತನ ವಿ.ವಿ.ಗಳಿಗೆ ಸಂಬಂಧಿಸಿದಂತೆ ಅನುದಾನ ಮತ್ತು ಕಾಯಂ ಸಿಬ್ಬಂದಿ ಒದಗಿಸುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಾಲ್ಕೈದು ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಶೀಘ್ರ ಸಭೆ ನಡೆಸಿ, ವರದಿ ನೀಡುತ್ತೇವೆ. ಇದರ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ತಿಳಿಸಿದರು.

ಈಗಾಗಲೇ ಅತಿಥಿ ಉಪನ್ಯಾಸಕರ ನೇಮಕಕ್ಕೆ ನೋಟಿಫಿಕೇಷನ್ ಹೊರಡಿಸಲಾಗಿದೆ. ಶೀಘ್ರವೇ ನೇಮಕಾತಿ ನಡೆಯಲಿದೆ ಎಂದರು.

‘ಒಂದು ವಿಶ್ವವಿದ್ಯಾಲಯಕ್ಕೆ ಪರಿಪೂರ್ಣವಾಗಿ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಅಂದಾಜು ₹350 ಕೋಟಿ ಅಗತ್ಯವಾಗಿದೆ. ಆದರೆ ಬಿಜೆಪಿ ಅವಧಿಯಲ್ಲಿ ಹೆಚ್ಚು ಖಾಸಗಿ ವಿವಿಗೆ ಅನುಮತಿ ನೀಡಲಾಗಿದೆ. ಜಿಲ್ಲೆಗೊಂದು ವಿವಿ ಯೋಜನೆಯಿಂದ ವಿವಿಗಳ ಘನತೆ ಮತ್ತು ಗೌರವಕ್ಕೆ ಕುಂದುಂಟಾಗಬಹುದು’ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.