‘ಹೊಸ ಕೋರ್ಸ್ ಆರಂಭಕ್ಕೆ ತಜ್ಞರ ಸಮಿತಿ ರಚಿಸಿ’
‘ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸ ಕೋರ್ಸ್‌ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು’ ಎಂದು ಮಂಡ್ಯ ವಿವಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯ ಮಧು ಜಿ.ಮಾದೇಗೌಡ ಹೇಳಿದರು. ಸಾಂಪ್ರದಾಯಿಕ ಶಿಕ್ಷಣಕ್ಕಷ್ಟೇ ಸೀಮಿತವಾದರೆ ವಿದ್ಯಾರ್ಥಿಗಳೂ ಆಸಕ್ತಿ ತೋರುವುದಿಲ್ಲ. ದಾಖಲಾತಿ ಕುಸಿದು ವಿವಿಗೂ ಹಿನ್ನಡೆ ಆಗಲಿದೆ. ಈಗಾಗಲೇ ಕೆಲವು ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಸಂಶೋಧನಾ ಚಟುವಟಿಕೆಗಳು ಕಷ್ಟ ಅನ್ನುವಂತಹ ಪರಿಸ್ಥಿತಿ ಇದೆ. ಹೀಗಾಗಿ ಹೊಸ ಕೋರ್ಸ್‌ಗಳ ಆರಂಭ ಆಗಬೇಕು ಎಂದು ಸಲಹೆ ನೀಡಿದರು.