ಮಂಡ್ಯ: 'ಸರ್ಕಾರಿ ಸೇವೆಗಳು ಜನರಿಗೆ ಸಮರ್ಪಕವಾಗಿ ನಿಗದಿತ ಸಮಯಕ್ಕೆ ಜನರ ಮನೆ ಬಾಗಿಲಿಗೆ ದೊರೆಯುವಂತೆ ಮಾಡಬೇಕು ಎಂಬ ಉದ್ದೇಶದಿಂದ ‘ಸರ್ಕಾರಿ ಯೋಜನೆಗಳು ಮನೆ ಬಾಗಿಲಿಗೆ‘ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮದವರು ಇದರ ಉಪಯೋಗವನ್ನು ಪಡೆದುಕೊಳ್ಳಿ' ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಹೇಳಿದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕೆನ್ನಾಳು ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರ್ಕಾರಿ ಸೇವೆಗಳು ನಿಮ್ಮ ಮನೆ ಬಾಗಿಲಿಗೆ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವು ನನ್ನ ಕನಸಿನ ಕೂಸು ಎಂದು ಹೇಳಿದರೆ ತಪ್ಪಾಗಲಾರದು. ಏಕೆಂದರೆ ಜನರು ಸರ್ಕಾರಿ ಕಚೇರಿ ತಾಲ್ಲೂಕು ಪಂಚಾಯಿತಿಗಳಲ್ಲಿ ಅಲೆಯುತ್ತಿರುವುದನ್ನು ನಾನು ನೋಡಿದ್ದೇನೆ, ನನ್ನ ಕ್ಷೇತ್ರದ ಜನರು ಇನ್ನು ಮುಂದೆ ಯಾವುದೇ ಕಚೇರಿಗಳಿಗೆ ಅಲೆಯುವುದು ಬೇಡ ಎಂದು ಸ್ವತಃ ನಾನೇ ಗ್ರಾಮಸ್ಥರ ಬಳಿ ತೆರಳುತ್ತಿದ್ದೇನೆ ಎಂದರು

ಕೆನ್ನಾಳು ಗ್ರಾಮದಲ್ಲಿ ಸರ್ಕಾರಿ ಸೇವೆಗಳು ನಿಮ್ಮ ಮನೆ ಬಾಗಿಲಿಗೆ ಎಂಬ ಒಂದು ಚಿಕ್ಕ ಪ್ರಯತ್ನವನ್ನು ಇಂದಿನಿಂದ 15 ದಿನಗಳವರೆಗೆ ಈ ಹಮ್ಮಿಕೊಂಡಿದ್ದೇನೆ. ಇದಕ್ಕೆ ಜನಗಳ ಸಹಕಾರ ಬಹಳ ಮುಖ್ಯ. ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಹೇಳಿದರು.

ಗ್ರಾಮದ ಜನರು ತಾಲ್ಲೂಕು ಕಚೇರಿಗಳಿಗೆ ಅಲೆಯಬಾರದು. ಕುಂದು ಕೊರತೆಗಳು, ಸಮಸ್ಯೆಗಳು ಇದ್ದಲ್ಲಿ ಇದೇ ಗ್ರಾಮದಲ್ಲಿ ಈ 15 ದಿನಗಳಲ್ಲಿ ಪರಿಹರಿಸಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು

ದಿನನಿತ್ಯ ಜನರು ನಮ್ಮ ಹತ್ತಿರ ಬರುವುದಾಗಲೀ ಅಥವಾ ಸರ್ಕಾರಿ ಅಧಿಕಾರಿಗಳ ಹತ್ತಿರ ಹೋಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾ ಅದೇ ನೋವಿನಲ್ಲಿ ಬಳಲುತ್ತಿದ್ದರು. ಇದಕ್ಕೆ ಏನಾದರೂ ಪರಿಹಾರ ಹುಡುಕಬೇಕು ಎಂದು ಜಿಲ್ಲಾಧಿಕಾರಿಗಳ ಹತ್ತಿರ ಅನುಮತಿ ಪಡೆದು ಈ ಕಾರ್ಯಕ್ರಮ ಆಯೋಜನೆ ಮಾಡಿದ್ದೇನೆ ಎಂದರು.

ಪ್ರತಿ ಮನೆಗಳಿಗೆ ಹಾಗೂ ಊರುಗಳಿಗೆ ಸಿಗುವಂತಹ ಸವಲತ್ತುಗಳನ್ನು ಪಟ್ಟಿ ಮಾಡಿಕೊಂಡು ಒದಗಿಸಬೇಕು, ಯಾರೂ ಕೂಡ ಸರ್ಕಾರದ ಯೋಜನೆಗಳಿಂದ ವಂಚಿತರಾಗಬಾರದು. ಈ ವಿನೂತನ ಕಾರ್ಯಕ್ರಮದಲ್ಲಿ ಪ್ರತಿ ದಿನ ಸಂಜೆ 4 ರಿಂದ 6 ಗಂಟೆವರೆಗೆ ಜನರಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದೇವೆ ಎಂದರು.

ಬಾಲ್ಯವಿವಾಹ, ಬಾಲ್ಯ ಕಾರ್ಮಿಕ ಪದ್ಧತಿ ಮುಂತಾದ ಸಾಮಾಜಿಕ ಪಿಡುಗನ್ನು ತೊಡೆದು ಹಾಕಲು, ಕಸ ವಿಲೇವಾರಿ, ಹಣ ಉಳಿತಾಯ ಮುಂತಾದ ಸಾರ್ವಜನಿಕ ಉಪಯುಕ್ತ ಕೆಲಸಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಸಹ ಈ ಕಾರ್ಯಕ್ರಮದಲ್ಲಿ ನಡೆಸಲಾಗುವುದು ಎಂದರು.

ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರು ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ನಂದೀಶ್, ತಹಶೀಲ್ದಾರ್ ಶ್ರೇಯಸ್, ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಗ್ರಾಮಾಡಳಿತ ಅಧಿಕಾರಿ ಪ್ರಕಾಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.