ಶ್ರೀರಂಗಪಟ್ಟಣ: ‘ವಿಧಾನ ಪರಿಷತ್ ಚುನಾವಣೆಯ ಬೆಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಅವರು ಕ್ರಿಮಿನಲ್ ಅಪರಾಧ ಹಿನ್ನೆಲೆಯುಳ್ಳವರಾಗಿದ್ದು ಆ ಬಗ್ಗೆ ಶೀಘ್ರ ದಾಖಲೆ ಬಿಡುಗಡೆ ಮಾಡಲಾಗುವುದು’ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ತಾಲ್ಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಭಾರತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಮಗಳು ಮತ್ತು ಪತ್ನಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಸೇರಿದಂತೆ ಕೆಜಿಎಫ್ ಬಾಬು ವಿರುದ್ಧ ಸುಮಾರು 40 ಪ್ರಕರಣಗಳು ದಾಖಲಾಗಿವೆ. ಜನರಿಗೆ ₹ 60 ಕೋಟಿಯಷ್ಟು ಮೋಸ ಮಾಡಿದ್ದಾರೆ. 3 ತಿಂಗಳು ಗಡಿಪಾರಾಗಿದ್ದು, ಜೈಲುವಾಸವನ್ನೂ ಅನುಭವಿಸಿದ್ದಾರೆ ಎಂದು ಡಿಸಿಪಿ ಅವರೇ ಹೇಳಿದ್ದಾರೆ. ಇದು ಗಾಬರಿ ಹುಟ್ಟಿಸುವ ಸಂಗತಿ’ ಎಂದು ಅವರು ಹೇಳಿದರು.

‘ಕೆಜಿಎಫ್ ಬಾಬು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ₹1,700 ಕೋಟಿ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಅವರ ಬಳಿ ಅದಕ್ಕಿಂತ ಎರಡು ಪಟ್ಟು ಆಸ್ತಿ ಇದೆ. ಅವರ ಹಿಂದೆ ಯಾವ ಡೆವಲಪರ್ಗಳು ಇದ್ದಾರೆ ಎಂಬುದೂ ಗೊತ್ತಿದೆ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಬೆಂಗಳೂರಿನಲ್ಲಿ ದಾಖಲೆ ಬಿಡುಗಡೆ ಮಾಡಲಾಗುವುದು’ ಎಂದು ಸಚಿವರು ತಿಳಿಸಿದರು.

‘ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ನನ್ನ ಹೆಸರು ಬಳಸಿಕೊಂಡು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎರಡು ನಿವೇಶನಗಳನ್ನು ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಅಧಿಕಾರಿಗಳು ಇತ್ತೀಚೆಗಷ್ಟೇ ತಿಳಿಸಿದ್ದಾರೆ’ ಎಂದು ಸೋಮಶೇಖರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.