ಮದ್ದೂರು: ಮದ್ದೂರು ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶುಲ್ಕವನ್ನು ನನ್ನ ಟ್ರಸ್ಟ್ ವತಿಯಿಂದಲೇ ಪಾವತಿ ಮಾಡುತ್ತೇನೆ ಎಂದು ಶಾಸಕ ಉದಯ್ ತಿಳಿಸಿದರು.

ಪಟ್ಟಣದ ಶಿವಪುರದಲ್ಲಿರುವ ಶಾಸಕರ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

‘ಕಳೆದ ವರ್ಷ ನಮ್ಮ ಕದಲೂರು ಉದಯ್ ಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತು ಕೊಟ್ಟಿದ್ದಂತೆ ಎಲ್ಲ ಸರ್ಕಾರಿ ಶಾಲೆಗಳ 1 ರಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿಗಳ ಶುಲ್ಕ ಪಾವತಿ ಮಾಡಲಾಗುವುದು’ ಎಂದರು.

ತಾಲ್ಲೂಕು ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ಸರ್ಕಾರಿ ಶಾಲೆಗಳು ಶಿಥಿಲ ಗೊಂಡಿವೆ. ಅದಕ್ಕೆ ಹಿಂದಿನ ಶಾಸಕರ ನಿರ್ಲಕ್ಷ್ಯವೇ ಕಾರಣ. ಮಾಹಿತಿ ಪಡೆದು ದುರಸ್ತಿಗೆ ಕ್ರಮವಹಿಸಲಾಗುವುದು ಎಂದರು. ಖಾಸಗಿ ಶಾಲೆಗಳಲ್ಲಿ ಅಧಿಕ ಡೊನೇಷನ್ ಹಾವಳಿ ಬಗ್ಗೆ ಗಮನಕ್ಕೆ ಬಂದಿದ್ದು, ತಾಲ್ಲೂಕಿನಲ್ಲಿ ಇದಕ್ಕೆ ಕಡಿವಾಣ ಹಾಕಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದೂ ಅವರು ತಿಳಿಸಿದರು.

ತಾಲ್ಲೂಕಿನ ಭಾರತಿನಗರದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವ ಬಗ್ಗೆ ಪರಿಶೀಲಿಸಲಾವುದು. ಸಾರ್ವಜನಿಕರು, ಕಾರ್ಯಕರ್ತರು ನನಿಗೆ ಹಾರ ಹಾಕುವುದು, ಪಟಾಕಿ ಸಿಡಿಸುವುದು ಬೇಡ. ಆ ಹಣವನ್ನು ಒಳ್ಳೆಯ ಕೆಲಸಗಳಿಗೆ ಬಳಸಬೇಕು ಎಂದು ಸಲಹೆ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾ. ಪಂ ಮಾಜಿ ಸದಸ್ಯ ಚೆಲುವರಾಜು, ಮುಖಂಡರಾದ ಚಂದೂಪುರ ಪಾಪಣ್ಣ, ಹರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.