ನಾಗಮಂಗಲ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರ ಸ್ವಾಮಿ ಅವರು ಶುಕ್ರವಾರ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಕ್ಷೇತ್ರಾಧಿದೇವತೆಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದು, ಪುತ್ರ ನಿಖಿಲ್ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಬೆಳಿಗ್ಗೆ 8 ಗಂಟೆಗೆ ಜೆಡಿಎಸ್ ಮುಖಂಡರು ಮತ್ತು ಬೆಂಬಲಿಗರೊಂದಿಗೆ ಆಗಮಿಸಿದ ಅವರು ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಗದ್ದುಗೆಗೆ ಪ್ರದಕ್ಷಿಣೆ ಹಾಕಿ, ಪ್ರಾರ್ಥನೆ ಸಲ್ಲಿಸಿದರು. ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಗೌರವಿಸಿ, ಆಶೀರ್ವಾದ ಮಾಡಿದರು. ಮಠದಲ್ಲಿ ಜೆಡಿಎಸ್ ಮುಖಂಡರೊಂದಿಗೆ ಅನ್ನ ಪ್ರಸಾದವನ್ನು ಸ್ವೀಕರಿಸಿದರು.

ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಸೋಮೇಶ್ವರನಾಥ ಸ್ವಾಮೀಜಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಸುರೇಶ್ ಗೌಡ ಜೊತೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.