ಶ್ರೀರಂಗಪಟ್ಟಣ: ತಾಲ್ಲೂಕಿನ ಬಾಬುರಾಯನಕೊಪ್ಪಲು ಗ್ರಾಮದವರಾದ, ಮೈಸೂರಿನ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಆರ್. ರಾಘವೇಂದ್ರ ಅವರು ಅತ್ಯುತ್ತಮ ಸೇವೆಗಾಗಿ 2021–22ನೇ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೆ.29ರಂದು ಕಾಲೇಜಿನ ಪ್ರಾಂಶುಪಾಲರಾದ ಸೌಮ್ಯಾ ಈರಪ್ಪ.ಕೆ ಅವರ ಜತೆಗೂಡಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಹಲವು ವರ್ಷಗಳಿಂದ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಯಾಗಿರುವ ರಾಘವೇಂದ್ರ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸುತ್ತಿದ್ದು, ದುಸ್ಥಿತಿಯಲ್ಲಿದ್ದ ಸ್ಮಾರಕಗಳಿಗೆ ಕಾಯಕಲ್ಪ ನೀಡಿದ್ದಾರೆ. ನದಿ ಸ್ವಚ್ಛತಾ ಆಂದೋಲನ ನಡೆಸಿದ್ದಾರೆ.

ಪಟ್ಟಣದ ಆಚೀವರ್ಸ್ ಅಕಾಡೆಯ ಸಂಸ್ಥಾಪಕರೂ ಆಗಿರುವ ರಾಘವೇಂದ್ರ ಸೇನೆ ಮತ್ತು ಪೊಲೀಸ್ ಸೇವೆಗೆ ಸೇರುವವರಿಗೆ ಕಳೆದ 10 ವರ್ಷಗಳಿಂದ ಉಚಿತವಾಗಿ ಉಚಿತ ತರಬೇತಿ ನೀಡುತ್ತಿದ್ದಾರೆ.

ರಾಘವೇಂದ್ರ ಅವರನ್ನು ಕಾಲೇಜಿನ ಗೌರವ ಕಾರ್ಯದರ್ಶಿ ನಾಡೋಜ ವೂಡೇ ಪಿ. ಕೃಷ್ಣ, ಶಾಸಕ ರಮೇಶ ಬಂಡಿಸಿದ್ದೇಗೌಡ, ಎನ್‌ಎಸ್‌ಎಸ್ ರಾಜ್ಯ ಘಟಕದ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ, ಮೈಸೂರು ವಿವಿ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಎಂ.ಬಿ. ಕುಮಾರ್ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.