ಪಾಂಡವಪುರ: ಅತಿವೇಗ ಮತ್ತು ಅಜಾಗರೂಕತೆಯಿಂದ ಟ್ರ್ಯಾಕ್ಟರ್ ಚಾಲನೆ ಮಾಡಿ ಅಪಘಾತವೆಸಗಿದ್ದ ಅಪರಾಧಿಗೆ 7 ತಿಂಗಳು 15 ದಿನಗಳ ಕಾರಾಗೃಹ ಶಿಕ್ಷೆ ಹಾಗೂ ₹ 7 ಸಾವಿರ ದಂಡ ವಿಧಿಸಿ ಪಾಂಡವಪುರ ಜೆಎಂಎಫ್ಸಿ ನ್ಯಾಯಾಲಯ ಆದೇಶ ನೀಡಿದೆ.

2022ರ ಏಪ್ರಿಲ್ 11ರಂದು ತಾಲ್ಲೂಕಿನ ಕ್ಯಾತನಹಳ್ಳಿಯಿಂದ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ಸೈಕಲ್ನಲ್ಲಿ ತೆರಳುತ್ತಿದ್ದ ಹೊನ್ನಯ್ಯ ಎಂಬುವರಿಗೆ ಎದುರಿನಿಂದ ಅತಿವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಹೊನ್ನಯ್ಯ ಅವರಿಗೆ ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ಕರೆದೊಯ್ಯುವವಾಗ ಮಾರ್ಗಮಧ್ಯೆದಲ್ಲಿ ಮೃತಪಟ್ಟಿದ್ದರು.

ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸ್ ಇನ್ಸ್ಪೆಕ್ಟರ್ ಎಚ್.ಆರ್.ವಿವೇಕಾನಂದ ಸಾಕ್ಷ್ಯಾಧಾರಗಳೊಂದಿಗೆ ಆರೋಪಿ ವಿರುದ್ಧ ದೋಷರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್.ಮಹೇಶ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹಿಸಿ ತನಿಖೆ ನಡೆಸಿದ ತನಿಖಾಧಿಕಾರಿ ಎಚ್.ಆರ್.ವಿವೇಕಾನಂದ, ಪ್ರಕರಣದ ಮೇಲುಸ್ತುವಾರಿ ಬಿ.ಜಿ.ಕುಮಾರ್, ತನಿಖಾ ಸಹಾಯಕರಾದ ಕೆ.ಶ್ರೀನಿವಾಸ ಮೂರ್ತಿ, ನ್ಯಾಯಾಲಯದ ಸಿಬ್ಬಂದಿ ಲಿಂಗಾಮಣಿ ಅವರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಎಚ್.ಎಸ್.ಮುರುಳಿ ಪ್ರಶಂಶಿಸಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಜಿ.ಪಿ.ಸುಧಾಮಣಿ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.