ಮಂಡ್ಯ: ಬಿಜೆಪಿ ಸರ್ಕಾರವನ್ನು ಆಕ್ಷೇಪಾರ್ಹ ಮಾತುಗಳಿಂದ ಟೀಕಿಸಿದ್ದಾರೆ ಎಂಬ ಆರೋಪದ ಮೇಲೆ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಗುರುವಾರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದರು.

ಇದನ್ನೂ ಓದಿ:ಏನು ಹೇಳಿದ್ದರು ಹಂ.ಪ.ನಾಗರಾಜಯ್ಯ?

ಜ.17ರಂದು ನಗರದಲ್ಲಿ ನಡೆದ ತಾಲ್ಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ನಾಗರಾಜಯ್ಯ, ಕೇಂದ್ರ ಸರ್ಕಾರವನ್ನು ದುರ್ಯೋಧನ, ಗೋಮುಖ ವ್ಯಾಘ್ರಕ್ಕೆ ಹೋಲಿಕೆ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಹಂ.ಪ.ನಾ ಅವರನ್ನು ಠಾಣೆಗೆ ಕರೆಸಲಾಗಿತ್ತು.

‘ಆಕ್ಷೇಪಾರ್ಹ ಹೇಳಿಕೆಗಳ ಯಾವುದೇ ದಾಖಲೆಗಳನ್ನು ದೂರುದಾರರು ಒದಗಿಸಿಲ್ಲ. ನಾಗರಾಜಯ್ಯ ಅವರ ಹೇಳಿಕೆ ಪಡೆದು ಕಳುಹಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

ಇದನ್ನೂ ಓದಿ:ಹಂ.ಪ.ನಾಗರಾಜಯ್ಯ ವಿಚಾರಣೆ: ಸಾಹಿತ್ಯ ವಲಯದಲ್ಲಿ ಖಂಡನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.