ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಆರ್‌ಎಸ್‌ ಅಣೆಕಟ್ಟೆಯಿಂದ ನೀರು ಬಿಡುಗಡೆ ಸಾಧ್ಯತೆ: 92 ಗ್ರಾಮಗಳಲ್ಲಿ ಕಟ್ಟೆಚ್ಚರ

Published : 20 ಜುಲೈ 2024, 7:05 IST
Last Updated : 20 ಜುಲೈ 2024, 7:05 IST
ಫಾಲೋ ಮಾಡಿ
Comments
ನದಿ ದಂಡೆಯಲ್ಲಿರುವ ಜಮೀನಿನ ಬೆಳೆವಿವರ ಪಟ್ಟಿ ಸಿದ್ಧಪ‍ಡಿಸಿ ಪ್ರವಾಸಿಗರ ನಿಯಂತ್ರಣಕ್ಕೆ ಗೃಹರಕ್ಷಕ ಸಿಬ್ಬಂದಿ ನಿಯೋಜಿಸಿ ದೂರು ಮತ್ತು ನೆರವಿಗೆ ಕಂಟ್ರೋಲ್‌ ರೂಂಗೆ ಕರೆ ಮಾಡಿ
ಪ್ರವಾಹ ಮುನ್ನೆಚ್ಚರಿಕೆ ಸೂಚನೆ 
ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡಲಾಗುವುದು. ಆದ್ದರಿಂದ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್‌ ಕೋರಿದ್ದಾರೆ. 
ಎಚ್ಚರಿಕೆಯ ಫಲಕ ಅಳವಡಿಸಿ
ಜಿಲ್ಲೆಯ ಜನ ಮತ್ತು ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ನದಿ ಪಾತ್ರದ ಸ್ಥಳಗಳಲ್ಲಿ ಅಪಾಯಕಾರಿ ಜಾಗ ಸೆಲ್ಫಿ ಪಾಯಿಂಟ್ ನದಿ ಪಾತ್ರದಲ್ಲಿ ಇರುವ ದೇವಸ್ಥಾನ ಗಗನಚುಕ್ಕಿ ಜಲಪಾತ ಮುತ್ತತ್ತಿ ಮುಂತಾದ ಸ್ಥಳಗಳಲ್ಲಿ ಎಚ್ಚರಿಕಾ ಸೂಚನಾ ಫಲಕ ಮತ್ತು ಬ್ಯಾರಿಕೇಡ್‌ಗಳನ್ನು ಕಡ್ಡಾಯವಾಗಿ ಅಳವಡಿಸಿ ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.  ನದಿ ಪಾತ್ರದಲ್ಲಿರುವ ಹೋಂ ಸ್ಟೇ ರೆಸಾರ್ಟ್‌ಗಳಿಗೆ ಭೇಟಿ ನೀಡಿ ಪ್ರವಾಹ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿ. ಶ್ರೀರಂಗಪಟ್ಟಣದ ಗಂಜಾಂ ಮಳವಳ್ಳಿಯ ಮುತ್ತತ್ತಿ ಹಾಗೂ ಗಗನಚುಕ್ಕಿ ಸೇರಿದಂತೆ ಜಿಲ್ಲೆಯ ಇನ್ನಿತರೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬಂದು ನೀರಿನಲ್ಲಿ ಈಜಾಡುವ ಸಾಧ್ಯತೆಯಿದೆ. ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಗೃಹರಕ್ಷಕ ಸಿಬ್ಬಂದಿ ನಿಯೋಜಿಸಿಕೊಳ್ಳಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT