ಮಂಡ್ಯ: ‘ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದು ತಪ್ಪಲ್ಲ, ವಿಡಿಯೊ ಮಾಡಿದ್ದೂ ತಪ್ಪಲ್ಲ, ಆದರೆ, ಹಾದಿಬೀದಿಯಲ್ಲಿ ಸಿಕ್ಕ ಪೆನ್‌ಡ್ರೈವ್ ಹಂಚಿದ್ದೇ ತಪ್ಪೆಂದು ಹೇಳುವ ಮೂಲಕ ಜೆಡಿಎಸ್, ಬಿಜೆಪಿ ಮುಖಂಡರು, ಪ್ರಜ್ವಲ್ ರೇವಣ್ಣ ಮಾಡಿದ ಕೃತ್ಯವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಶುಕ್ರವಾರ ದೂರಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಜ್ವಲ್‌ನನ್ನು ಕರೆಸುತ್ತಾರೋ ಬಿಡುತ್ತಾರೊ ಎಂಬುದು ದೇವೇಗೌಡರ ಕುಟುಂಬಕ್ಕೆ ಬಿಟ್ಟ ವಿಚಾರ. ನಾನು ಆ ಬಗ್ಗೆ ಮಾತನಾಡುವುದಿಲ್ಲ. ಕುಮಾರಸ್ವಾಮಿ ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ, ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಬೇರೆ ಯಾರಿಗೂ ತಿಳಿಯುವುದಿಲ್ಲವೆಂದುಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡಿ, ತನಿಖಾ ಸಂಸ್ಥೆಗೆ ಸೂಚಿಸಿ ಪ್ರಜ್ವಲ್ ಅವರನ್ನು ದೇಶಕ್ಕೆ ಕರೆತರುವ ಪ್ರಯತ್ನ ನಡೆಯಬೇಕಾಗಿತ್ತು. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಜನ ಎಲ್ಲವನ್ನೂ ಗಮನಿಸುತ್ತಿದ್ದು ಅವರೇ ತೀರ್ಮಾನಿಸುತ್ತಾರೆ’ ಎಂದರು.

‘ರಾಜ್ಯದಲ್ಲಿ ವಾಡಿಕೆಗಿಂತ ಶೇ 50ರಷ್ಟು ಹೆಚ್ಚು ಮಳೆಯಾಗಿದೆ. ರೈತರಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲಾಗುವುದು. ಮೂರು ತಿಂಗಳಿಗೆ ಆಗುವಷ್ಟು ಸಂಗ್ರಹವಿದೆ. ಆತಂಕ ಬೇಡ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.