ಶ್ರೀರಂಗಪಟ್ಟಣ: ‘ಮುಂಜಾಗ್ರತೆ ವಹಿಸಿದರೆ ಸೊಳ್ಳೆ ಕಡಿತದಿಂದ ಬರುವ ಮಲೇರಿಯಾ ರೋಗ ತಡೆಯಲು ಸಾಧ್ಯ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಡಿ.ಟಿ. ಮಂಜುನಾಥ್ ಹೇಳಿದರು.

ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಏರ್ಪಡಿಸಿದ್ದ ವಿಶ್ವ ಮಲೇರಿಯಾ ನಿರ್ಮೂಲನಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಮನೆಯ ಆಸುಪಾಸಿನಲ್ಲಿ ಮತ್ತು ಇನ್ನಿತರ ಜನವಸತಿ ಸ್ಥಳಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಎಳನೀರು ಚಿಪ್ಪು, ಪ್ಲಾಸ್ಟಿಕ್ ಲೋಟ, ಮಡಕೆ, ಒರಳು ಕಲ್ಲುಗಳನ್ನು ಹತ್ತಿರದಲ್ಲಿ ಇಡಬಾರದು. ಮನೆಯ ಒಳಗೆ ಮತ್ತು ಹೊರಗೆ ನೀರು ತುಂಬುವ ಪಾತ್ರೆ, ತೊಟ್ಟಿಗಳನ್ನು ವಾರಕ್ಕೊಮ್ಮೆ ತೊಳೆದು ಒಣಗಿಸಿದರೆ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಬಹುದು’ ಎಂದು ಅವರು ಹೇಳಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಮಾತನಾಡಿ, ‘ಸೊಳ್ಳೆಗಳ ಕಡಿತದಿಂದ ಮಲೇರಿಯಾ ಮಾತ್ರವಲ್ಲದೆ, ಡೆಂಗಿ, ಚಿಕೂನ್ ಗುನ್ಯಾ, ಆನೆಕಾಲು ರೋಗ, ಮಿದುಳು ಜ್ವರ ಕೂಡ ಬರುತ್ತದೆ. ಮಲಗುವ ಸ್ಥಳದಲ್ಲಿ ಸೊಳ್ಳೆ ಪರದೆ ಇತರ ಸೊಳ್ಳೆ ನಿರೋಧಕಗಳನ್ನು ಬಳಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ‘ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧ ಹೋರಾಟವನ್ನು ವೇಗಗೊಳಿಸೋಣ’ ಎಂಬ ಘೋಷ ವಾಕ್ಯವನ್ನು ಪಠಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಕೆ.ಎಂ. ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಕಿರಿಯ ತರಬೇತಿ ಅಧಿಕಾರಿಗಳಾದ ಎಸ್.ಶಿವಕುಮಾರ್, ಕೆ.ಎಂ. ಇಂದಿರಾ, ಆರೋಗ್ಯ ನಿರೀಕ್ಷಣಾಧಿಕಾಗಳಾದ ಜಿ.ಮೋಹನ್, ಜಿ.ಬಿ. ಹೇಮಣ್ಣ, ಎಂ.ಸಿ. ಚಂದನ್, ಎಂ.ಎನ್. ಕೃಷ್ಣೇಗೌಡ, ಆಶಾ ಕಾರ್ಯಕರ್ತೆ ಅಶ್ವಿನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.