ಮದ್ದೂರು: ಮದ್ದೂರು ಬಳಿಯ ಕೆ.ಶಿಂಷಾ ನದಿ ಪಾತ್ರದ ಕೆ.ಕೋಡಿಹಳ್ಳಿ ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಉಪ ವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ, ಪೊಲೀಸರು ಬುಧವಾರ ದಾಳಿ ನಡೆಸಿ ಮರಳು ಹಾಗೂ ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ದಂಧೆಕೋರರು ಮರಳು ತೆಗೆಯುತ್ತಿದ್ದ ಬಗ್ಗೆ ದೂರು ಕೇಳಿ ಬಂದಿತ್ತು.

ಕಳೆದ ಹಲವಾರು ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಶಿಂಷಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಅಪಾರ ಪ್ರಮಾಣದಲ್ಲಿ ಮರಳು ಸಂಗ್ರಹ ವಾಗಿತ್ತು. ಇದರ ಮೇಲೆ ಅಕ್ರಮ ಮರಳು ಸಾಗಾಣಿಕೆ ಮಾಡುವವರ ಕಣ್ಣಿಗೆ ಬಿದ್ದಿತ್ತು. ಆದರೂ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳದೆ ಇದ್ದುದರ ಬಗ್ಗೆ ಖಂಡನೆ ವ್ಯಕ್ತವಾಗಿತ್ತು.

ಸಾರ್ವಜನಿಕರಿಂದ ದೂರು ಬಂದಿ ದ್ದರಿಂದ ಬುಧವಾರ ದಿಢೀರ್ ಭೇಟಿ ನೀಡಿದ ಮಂಡ್ಯ ಉಪ ವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ, ಮದ್ದೂರು ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದಾಗ ಮರಳು ದಂದೆ ಮಾಡುವವರು ಪರಾರಿಯಾಗಿದ್ದಾರೆ.

ದಾಳಿ ವೇಳೆ ಸುಮಾರು 50 ಟಿಪ್ಪರ್ ಮರಳು, ಮರಳು ತುಂಬಲು ಬಳಸುತ್ತಿದ್ದ ಸುಮಾರು 15 ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮಂಗಳವಾರವೇ ಭೇಟಿ ನೀಡಿ ಉಪವಿಭಾಗಾಧಿಕಾರಿ ಪರಿಶೀಲನೆ ನಡೆಸಿದ್ದರು. ಸಂಜೆ ವರೆಗೂ ದಾಳಿ ಮುಂದುವರಿದಿತ್ತು.

ದಂದೆ ಕೋರರ ವಿರುದ್ಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.