ಮಂಡ್ಯ: ‘ನಗರದಲ್ಲಿ ಡಿ.20, 21, 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ‘ನಾವಾಡುವ ನುಡಿಯೇ ಕನ್ನಡ ನುಡಿ’ ಶೀರ್ಷಿಕೆಯಡಿ ನಾಡು–ನುಡಿಗೆ ಸಂಬಂಧಿಸಿದ ಗೀತಗಾಯನವನ್ನು ಏರ್ಪಡಿಸಲಾಗುವುದು’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನ.24ರಂದು ಬೆಳಿಗ್ಗೆ 9ಕ್ಕೆ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನುರಿತ ಸಂಗೀತಗಾರರ ಸಮ್ಮುಖದಲ್ಲಿ ಗಾಯಕರನ್ನು ಆಯ್ಕೆ ಮಾಡಲಾಗುವುದು. ಗಾಯಕರು ಡಿ.1ರಂದು ಪ್ರದರ್ಶನ ನೀಡಲಿದ್ದು, ಚಿತ್ರೀಕರಿಸಲಾಗುವುದು. ನಂತರ ಚಂದನ ಟಿ.ವಿ.ಯಲ್ಲಿ ‘ಮಧುರ ಮಧುರವೀ ಮಂಜುಳಗಾನ’ ಕಾರ್ಯಕ್ರಮದ ಬದಲಿಗೆ ಈ ನೂತನ ಗೀತಗಾಯನವನ್ನು ಪ್ರಸಾರ ಮಾಡಲಾಗುವುದು’ ಎಂದರು.

ವಿಶ್ವೇಶ್ವರಯ್ಯ ಸಂಬಂಧಿಕರ ಬೇಸರ:

‘ವಿದೇಶದಲ್ಲಿರುವ ಕನ್ನಡಿಗರಿಗೆ ಆಹ್ವಾನ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದ ಮೇರೆಗೆ, ಅಮೆರಿಕದಲ್ಲಿ ನೆಲೆಸಿರುವ ಸರ್ ಎಂ.ವಿಶ್ವೇಶ್ವರಯ್ಯನವರ ಮೊಮ್ಮಗಳು ಸೇರಿದಂತೆ ಹಲವರನ್ನು ಆಹ್ವಾನಿಸಿದ್ದೇವೆ. ಅದಕ್ಕೆ ಕೆಲವರು ಆಕ್ಷೇಪಿಸಿದ್ದಾರೆ. ಮಂಡ್ಯ ಜಿಲ್ಲೆಗೆ ಅಮೂಲ್ಯ ಕೊಡುಗೆ ನೀಡಿರುವ ವಿಶ್ವೇಶ್ವರಯ್ಯನವರ ಸಂಬಂಧಿಕರನ್ನು ಆಹ್ವಾನಿಸಿ, ಗೌರವಿಸುವುದು ನಮ್ಮ ಕರ್ತವ್ಯವಲ್ಲವೇ’ ಎಂದರು. ‘ಸಾಮಾಜಿಕ ಮಾಧ್ಯಮಗಳಲ್ಲಿ ನಡೆದ ಚರ್ಚೆಯಿಂದ ಅವರ ಸಂಬಂಧಿಕರು ಬೇಸರ ವ್ಯಕ್ತಪಡಿಸಿ ಪರಿಷತ್ತಿಗೆ ಪತ್ರ ಬರೆದಿದ್ದಾರೆ ಎಂದರು.

ಒಂದು ದಿನದ ವೇತನ:

ಜಿಲ್ಲೆಯ ಸರ್ಕಾರಿ ನೌಕರರು ಒಂದು ದಿನದ ವೇತನವನ್ನು (ಸುಮಾರು ₹5 ಕೋಟಿ) ಸಾಹಿತ್ಯ ಸಮ್ಮೇಳನಕ್ಕಾಗಿ ದೇಣಿಗೆಯಾಗಿ ನೀಡಲು ಒಪ್ಪಿಗೆ ನೀಡಿದ್ದಾರೆ. ಅವರಿಗೆ ಪರಿಷತ್ತಿನ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹೇಶ ಜೋಶಿ ತಿಳಿಸಿದರು.

‘ಚುನಾವಣೆಯಿಂದ ಸಮ್ಮೇಳನಾಧ್ಯಕ್ಷರ ಆಯ್ಕೆ ವಿಳಂಬ’

‘ಸಮ್ಮೇಳನಾಧ್ಯಕ್ಷರ ಆಯ್ಕೆಗಾಗಿ ಅ.10ರಂದು ನಡೆಯಬೇಕಿದ್ದ ಕಾರ್ಯಕಾರಿ ಸಮಿತಿ ಸಭೆಯನ್ನು ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಅನುಮತಿ ಪಡೆದ ನಂತರ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಸಿ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು. ‘ಬೇರೆ ಜಿಲ್ಲೆಗಳಲ್ಲೂ ಸಮ್ಮೇಳನಕ್ಕೆ ಅನುದಾನ ತಡವಾಗಿಯೇ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರ ಮಂಡ್ಯದ ಸಮ್ಮೇಳನಕ್ಕೆ ₹25 ಕೋಟಿ ಅನುದಾನಕ್ಕೆ ಮಂಜೂರಾತಿ ನೀಡಿದೆ. ಹಣಕಾಸು ಇಲಾಖೆಯಿಂದ ಜಿಲ್ಲಾಧಿಕಾರಿ ಖಾತೆಗೆ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ’ ಎಂದರು.

‘ಜಾಗದ ವಿವಾದ: ಮಂಡ್ಯದ ಗೌರವಕ್ಕೆ ಧಕ್ಕೆ’

‘ಸಮ್ಮೇಳನಕ್ಕೆ 37 ದಿನವಿರುವಾಗ ಕೆಲವರು ಜಾಗದ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವುದರಿಂದ ತೀವ್ರ ಬೇಸರವಾಗಿದೆ. ಅನಗತ್ಯ ವಿವಾದದಿಂದ ಜಿಲ್ಲೆಯ ಗೌರವಕ್ಕೆ ಧಕ್ಕೆ ಬರುತ್ತದೆ. ಗೊಂದಲಗಳಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿ ಬಳಿ ಕೇಳಿ ಮಾಹಿತಿ ಪಡೆಯಲಿ. ಮಾಧ್ಯಮದವರ ಮುಂದೆ ಹೋಗಿ ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ’ ಎಂದು ಮಹೇಶ್ ಜೋಷಿ ಪ್ರತಿಪಾದಿಸಿದರು. ‘ಸಮ್ಮೇಳನಕ್ಕೆ ಸಕಲ ಸೌಲಭ್ಯ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಜಾಗ ಆಯ್ಕೆ ಮಾಡುವುದು ವೇದಿಕೆ ನಿರ್ಮಿಸುವುದು ಪರಿಷತ್ತಿನ ಅಧ್ಯಕ್ಷರ ಕೆಲಸವಲ್ಲ. ಈಗಾಗಲೇ 28 ಉಪಸಮಿತಿಗಳನ್ನು ರಚಿಸಿ ನಿರ್ದಿಷ್ಟ ಜವಾಬ್ದಾರಿ ಮತ್ತು ಕಾರ್ಯಗಳನ್ನು ಹಂಚಿಕೆ ಮಾಡಲಾಗಿದೆ. ಗೋಷ್ಠಿಗಳಲ್ಲಿ ವಿಷಯಗಳ ಆಯ್ಕೆ ಅತಿಥಿಗಳ ಆಯ್ಕೆ ಸೇರಿದಂತೆ ಸಾಹಿತ್ಯಿಕ ಚಟುವಟಿಕೆಯನ್ನು ಪರಿಷತ್ತು ನೋಡಿಕೊಳ್ಳುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.