ಶ್ರೀರಂಗಪಟ್ಟಣ (ಮಂಡ್ಯ): ‘ಅಕ್ಟೋಬರ್ 4ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಉತ್ಸವವನ್ನು ಚಿತ್ರನಟ ಶಿವರಾಜಕುಮಾರ್ ಉದ್ಘಾಟಿಸಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಮಧ್ಯಾಹ್ನ ಕಿರಂಗೂರು ದಸರಾ ಬನ್ನಿ ಮಂಟಪದ ಬಳಿ ಜಂಬೂ ಸವಾರಿಗೆ ಶಿವರಾಜಕುಮಾರ್ ಚಾಲನೆ ನೀಡಲಿದ್ದು, ಮೂರು ಆನೆಗಳು ಪಾಲ್ಗೊಳ್ಳಲಿವೆ’ ಎಂದು ತಿಳಿಸಿದರು.

‘ಸಂಜೆ ಶ್ರೀರಂಗನಾಥಸ್ವಾಮಿ ದೇವಾಲಯ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಲಿದ್ದಾರೆ. ಗಾಯಕ ವಿಜಯ್ ಪ್ರಕಾಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕಾರ್ಯಕ್ರಮ ನೀಡಲಿದ್ದಾರೆ. ಸ್ಥಳೀಯ ಕಲಾವಿದರೂ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.