ನಾಗಮಂಗಲ (ಮಂಡ್ಯ): ಆದಿಚುಂಚನಗಿರಿ ಮಠದ ಆವರಣದಲ್ಲಿ ಎರಡು ದಿನಗಳ ರಾಜ್ಯಮಟ್ಟದ ಯುವಜನೋತ್ಸವಕ್ಕೆ ರಾಜ್ಯಪಾಲರಾದ ಥಾವರ್ಚಂದ್ ಗೆಹಲೋತ್ಮಂಗಳವಾರ ಚಾಲನೆ ನೀಡಿದರು.

ರಾಜ್ಯದ ವಿವಿಧೆಡೆಯಿಂದ 3 ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ಮಠದ ಆವರಣದಲ್ಲಿ ಕಲಾವಿದರು, ತೀರ್ಪುಗಾರರು ತಂಗಲು ಸಕಲ ವ್ಯವಸ್ಥೆ ಮಾಡಲಾಗಿದೆ.

ಜನಪದ ಗೀತೆ, ನೃತ್ಯ, ಏಕಾಂತ ನಾಟಕ, ಶಾಸ್ತ್ರೀಯ ನೃತ್ಯ, ಗಾಯನ, ಆಶುಭಾಷಣ ಸೇರಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ಸಮಾರಂಭದಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್, ಶಾಸಕ ಸುರೇಶ್ ಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.